ಅರುಣಾಚಲಪ್ರದೇಶ : ಭಾರತದ ಈಶಾನ್ಯ ರಾಜ್ಯ ಅರುಣಾಚಲಪ್ರದೇಶದ ದಕ್ಷಿಣ ಚಾಂಗ್‌ಲಾಂಗ್‌ನಲ್ಲಿ ಇಂದು ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ಪ್ರಕಾರ, ಚಾಂಗ್ಲಾಂಗ್‌ನಿಂದ 222 ಕಿ.ಮೀ ದಕ್ಷಿಣದಲ್ಲಿ 4.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಇದಕ್ಕೂ ಮೊದಲು ಮುಂಜಾನೆ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ 7.46ಕ್ಕೆ 3.5 ತೀವ್ರತೆಯ ಭೂಕಂಪ ಸಂಭವಿಸಿದೆ.
ಇದನ್ನೂ ಓದಿ: ಅಸ್ಸಾಂನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಜನಜೀವನ ಸಂಪೂರ್ಣ ಅಸ್ತವ್ಯಸ್ತ