ಕಚ್/ಪಾಲ್ಘರ್: ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಲಘು ಭೂಕಂಪನ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಈ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟ ವರದಿಯಾಗಿಲ್ಲ.
ಇಂದು ಬೆಳಗ್ಗೆ 4.52 ಮತ್ತು 6.06ಕ್ಕೆ ಗುಜರಾತ್ನ ಕಚ್ ಜಿಲ್ಲೆಯಲ್ಲಿ 3.1 ಮತ್ತು 1.3 ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಕಚ್ನ ರಾಪರ್ ಪ್ರದೇಶದಿಂದ 15 ಕಿ.ಮೀ ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ದಾಖಲಾಗಿದೆ.
ಇದನ್ನೂ ಓದಿ: ಟ್ವಿಟರ್ನಲ್ಲಿರುವ ಎಲ್ಲಾ ಅಶ್ಲೀಲ ವಿಷಯಗಳನ್ನು ತಕ್ಷಣವೇ ತೆಗೆಯಿರಿ: NCW ತಾಕೀತು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಉಂಟಾದ ಭೂಕಂಪನವು ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆಯಿದ್ದು, ಬೆಳಗ್ಗೆ 7.07ಕ್ಕೆ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.