ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿ ಆರೋಪವನ್ನು ಚುನಾವಣಾ ಆಯೋಗ (ಇಸಿಐ) ಭಾನುವಾರ ಅಲ್ಲಗಳೆದಿದೆ. ರಾಜ್ಯದ ವೀಕ್ಷಕರು ಮತ್ತು ಮುಖ್ಯ ಕಾರ್ಯದರ್ಶಿ ನೀಡಿದ ವರದಿ ಆಧರಿಸಿ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬ್ಯಾನರ್ಜಿಯ ಮೇಲೆ ಹಲ್ಲೆ ನಡೆದಿದೆ ಎಂಬ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸಲ್ಲಿಸಿದ ವರದಿಯಲ್ಲಿ ಸಾಕಷ್ಟು ಮಾಹಿತಿಯಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿತ್ತು. ಅಲ್ಲದೇ ಈ ಬೆನ್ನಲ್ಲೇ ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ, ವಿಶೇಷ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ಇಸಿ ಹೊಸ ವಿವರವಾದ ವರದಿಯನ್ನು ಕೋರಿತ್ತು.
ಇದನ್ನೂ ಓದಿ: ಪಶ್ಚಿಮ ಬಂಗಾಳ : ಬಿಜೆಪಿಗೆ ಮತ ಹಾಕದಂತೆ ಪೋಸ್ಟರ್ ಪ್ರದರ್ಶಿಸಿದ ನವ ದಂಪತಿ
ರಾಜ್ಯ ಸರ್ಕಾರ ಸಲ್ಲಿಸಿದ ವರದಿಯಲ್ಲಿ ಘಟನೆ ಹೇಗೆ ಸಂಭವಿಸಿತು ಮತ್ತು ಅದರ ಹಿಂದೆ ಯಾರು ಇರಬಹುದು ಎಂಬ ಮಾಹಿತಿಯ ಕೊರತೆಯಿದೆ ಎಂದು ಮೂಲಗಳು ತಿಳಿಸಿವೆ. ಮಮತಾ ಮೇಲೆ ಹಲ್ಲೆ ನಡೆದಿದೆ ಎಂಬುದನ್ನು ಸಾಬೀತುಪಡಿಸಲು ಯಾವುದೇ ಸಿಸಿಟಿವಿ ದೃಶ್ಯಾವಳಿಗಳಿಲ್ಲ ಎಂದು ವರದಿಗಳು ತಿಳಿಸಿವೆ.
ಮಾರ್ಚ್ 10 ರಂದು ಸಂಜೆ ನಂದಿಗ್ರಾಮ್ ವಿಧಾನಸಭಾ ವಿಭಾಗದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಅಪರಿಚಿತ ಜನರಿಂದ ತಳ್ಳಲ್ಪಟ್ಟರು. ಇದರಿಂದ ಬ್ಯಾನರ್ಜಿ ಕೆಳಗೆ ಬಿದ್ದು ಎಡಗಾಲಿಗೆ ಮತ್ತು ಸೊಂಟಕ್ಕೆ ಗಾಯಗಳಾಗಿವೆ ಎಂದು ಆರೊಪಿಸಲಾಗಿತ್ತು.
ಇದಕ್ಕೂ ಮುನ್ನ ಟಿಎಂಸಿ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿಯಾಗಿ ನಂದಿಗ್ರಾಮ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಡೆದ ದಾಳಿಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿತ್ತು. ನಂದಿಗ್ರಾಮ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಮೇಲೆ ನಾಲ್ಕೈದು ಜನ ಹಲ್ಲೆ ಮಾಡಿದ್ದಾರೆ ಎಂದು ಬ್ಯಾನರ್ಜಿ ಆರೋಪಿಸಿದ್ದರು.
ಇದನ್ನೂ ಓದಿ: ಮಮತಾ ಮೇಲಿನ ಹಲ್ಲೆ ಪ್ರಕರಣ: ವಿಸ್ತೃತ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚನೆ
294 ಸದಸ್ಯರ ಬಲವಿರುವ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.