ನವದೆಹಲಿ: ಕೇಂದ್ರ ಚುನಾವಣಾ ಆಯೋಗ 14 ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ಕ್ಕೆ ಮತ ಎಣಿಕೆ ನಡೆಯಲಿದೆ.
ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ ಹವೇಲಿ, ಮಧ್ಯಪ್ರದೇಶದ ಖಾಂಡ್ವಾ ಮತ್ತು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಹಾನಗಲ್ನಲ್ಲಿ ಸಿಎಂ ಉದಾಸಿ ಮತ್ತು ಸಿಂದಗಿ ಕ್ಷೇತ್ರದಲ್ಲಿ ಎಂಸಿ ಮನಗೂಳಿ ಅವರ ನಿಧನದಿಂದಾಗಿ ಈ ಕ್ಷೇತ್ರಗಳು ತೆರವಾಗಿದ್ದವು.
ಅಕ್ಟೋಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 13 ಕೊನೆಯ ದಿನವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಇದನ್ನೂ ಓದಿ: ಮಂಗಳೂರು: ನೈತಿಕ ಪೊಲೀಸ್ ಗಿರಿ ಆರೋಪ.. ವೈರಲ್ ವಿಡಿಯೋ ಆಧರಿಸಿ ಐವರ ಬಂಧನ