ETV Bharat / bharat

ಮಮತಾ ಮೇಲಿನ ಹಲ್ಲೆ ಪ್ರಕರಣ: ವಿಸ್ತೃತ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚನೆ

ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ವರದಿಯು ಗೊಂದಲದಿಂದ ಕೂಡಿದೆ ಎಂದು ಚುನಾವಣಾ ಆಯೋಗ ಹೇಳಿದ್ದು, ಇದನ್ನು ವಿಸ್ತೃತ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

mamatha
mamatha
author img

By

Published : Mar 13, 2021, 10:32 PM IST

ಕೋಲ್ಕತಾ (ಪಶ್ಚಿಮ ಬಂಗಾಳ): ಮಾರ್ಚ್ 10ರಂದು ನಂದಿಗ್ರಾಮ್​ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ವರದಿಯು ಗೊಂದಲದಿಂದ ಕೂಡಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಹಾಗಾಗಿ ಈ ಸಂಬಂಧ ವಿಸ್ತೃತ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರಿಗೆ ಸೂಚಿಸಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಹೇಗೆ ನಡೆಯಿತು ಮತ್ತು ಇದರ ಹಿಂದೆ ಯಾರು ಇರಬಹುದು ಎಂಬಂತಹ ವಿವರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ವರದಿಯು ಗೊಂದಲದಿಂದ ಕೂಡಿದೆ ಮತ್ತು ಘಟನೆ ಹೇಗೆ ಸಂಭವಿಸಿತು ಅಥವಾ ಅದರ ಹಿಂದೆ ಯಾರು ಇರಬಹುದು ಎಂಬಂತಹ ಯಾವುದೇ ವಿವರಗಳು ಇರಲಿಲ್ಲ. ಹೆಚ್ಚಿನ ವಿವರಗಳನ್ನು ನೀಡುವಂತೆ ನಾವು ರಾಜ್ಯ ಆಡಳಿತಕ್ಕೆ ಸೂಚಿಸಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.