ETV Bharat / bharat

ಡಿಕೆಶಿ, ಸಹೋದರ ಡಿಕೆ ಸುರೇಶ್​ಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ - ರಾಹುಲ್​ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ED again summons DK Shivakumar and his brother DK Suresh

author img

By

Published : Nov 5, 2022, 1:11 PM IST

ನವದೆಹಲಿ/ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 7 ರಂದು ಅಧಿಕಾರಿಗಳ ಮುಂದೆ ಹಾಜರಾಗುವಂತೆ ಶುಕ್ರವಾರ ಸಮನ್ಸ್ ನೀಡಿದೆ.

ನನಗೆ ಮತ್ತು ನನ್ನ ಸಹೋದರನಿಗೆ ನ.7 ರಂದು ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ. ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾನು ಈ ಕಾರ್ಯಕ್ರಮದಲ್ಲಿ ನಿರತನಾಗಿದ್ದೇನೆ. ಇಡಿ ಅಧಿಕಾರಿಗಳ ಮುಂದೆ ಹಾಜರಾಗುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

  • Bengaluru | My brother & I have been summoned. I'm looking at it. I'm occupied with our national president's programs on Nov 7. I'll take a decision on it today: Karnataka Cong chief DK Shivakumar on ED's summons asking him to appear before it on Nov 7 in a money laundering case pic.twitter.com/ftWrdsHJGh

    — ANI (@ANI) November 5, 2022 " class="align-text-top noRightClick twitterSection" data=" ">

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ರಾಜ್ಯ ಪ್ರವೇಶಿಸಿದ್ದ ವೇಳೆ ಡಿಕೆ ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿತ್ತು. ಇದೀಗ ಮತ್ತೆ ನೋಟಿಸ್ ನೀಡಿದ್ದು, ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕಿತ್ತೂರಿನಲ್ಲಿ ವಿನಯೋತ್ಸವ: ಶಾಸಕ ಅಮೃತ್ ದೇಸಾಯಿಗೆ ಟಕ್ಕರ್ ಕೊಡಲು ವಿನಯ್ ಕುಲಕರ್ಣಿ ಶಕ್ತಿ ಪ್ರದರ್ಶನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.