ನವದೆಹಲಿ: ಕೇರಳದಲ್ಲಿ ಕೋಲಾಹಲ ಎಬ್ಬಿಸಿರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಈ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿರುವ ಸ್ವಪ್ನಾ, ಈ ಬಗ್ಗೆ ಹೇಳಿಕೆ ನೀಡಲು ಇ.ಡಿ. ವಿಚಾರಣೆ ನಡೆಸಿದೆ.
ಸ್ವಪ್ನಾರ ಆರೋಪವೇನು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿರುವ ಸ್ವಪ್ನಾ ಅವರು, ಸಿಎಂ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಹಗರಣದಲ್ಲಿ ಭಾಗಿಯಾದ ಆರೋಪ ಹೊರಿಸಿದ್ದಾರೆ. ಇದು ರಾಜ್ಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಹಗರಣದಲ್ಲಿ ಭಾಗಿ ಆರೋಪದ ಕಾರಣ ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ನಡೆಸುತ್ತಿವೆ.
ಏನಿದು ಪ್ರಕರಣ?: ಜು.5, 2020ರಲ್ಲಿ ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 15 ಕೋಟಿ ರೂ. ಮೌಲ್ಯದ 30 ಕೆಜಿ ಚಿನ್ನ ಇದ್ದ ಬ್ಯಾಗ್ ವಶಕ್ಕೆ ಪಡೆದಿದ್ದರು. ಯುಎಇ ದೂತಾವಾಸ ಕಚೇರಿಯ ಬ್ಯಾಗೇಜ್ ವಿಳಾಸ ಹೊಂದಿದ್ದ ಬ್ಯಾಗ್‌ನಲ್ಲಿ ಈ ಚಿನ್ನ ಪತ್ತೆಯಾಗಿತ್ತು.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ..1000ಕ್ಕೂ ಹೆಚ್ಚು ಜನ ಸಾವು, ಅವಶೇಷಗಳಡಿ ಸಿಲುಕಿದ ನೂರಾರು ಜನ!