ETV Bharat / bharat

ಟಿಎಂಸಿ ಸಚಿವರ ಆಪ್ತೆ ಮನೆಯಲ್ಲಿ ₹20 ಕೋಟಿ ನಗದು.. ಮುಂದುವರಿದ ಶೋಧಕಾರ್ಯ - Trinamool minister Partha Chatterjee aide

ತೃಣಮೂಲ ಕಾಂಗ್ರೆಸ್​ ಪಕ್ಷದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ನಿವಾಸದಲ್ಲಿ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಸಿಕ್ಕಿದೆ.

ED recovered Rs 20 crore cash
ED recovered Rs 20 crore cash
author img

By

Published : Jul 22, 2022, 8:59 PM IST

Updated : Jul 22, 2022, 9:52 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ಪಕ್ಷದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಮನೆಯಲ್ಲಿ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿನ ಅಕ್ರಮ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಅರ್ಪಿತಾ ಮುಖರ್ಜಿ ಅವರ ವಸತಿ ಆವರಣದಲ್ಲಿ 20 ಕೋಟಿ ರೂಪಾಯಿ ಸಿಕ್ಕಿದೆ.

  • ED is carrying out search operations at various premises linked to recruitment scam in the West Bengal School Service Commission and West Bengal Primary Education Board. pic.twitter.com/oM4Bc0XTMB

    — ANI (@ANI) July 22, 2022 " class="align-text-top noRightClick twitterSection" data=" ">

ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿಯಾಗಿರುವ ಅರ್ಪಿತಾ ಮುಖರ್ಜಿ ಹಗರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅರ್ಪಿತಾ ಮುಖರ್ಜಿ ಬಳಿ ಒಟ್ಟು 20 ಕ್ಕೂ ಹೆಚ್ಚು ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿದ್ದು, ತಪಾಸಣೆ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಅವರ ಸಹ ಸಂಸ್ಥೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜೊತೆಗೆ ಶಿಕ್ಷಣ ಸಚಿವ ಪರೇಶ್ ಅಧಿಕಾರಿ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ಎಸ್‌ಎಸ್‌ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಇಬ್ಬರೂ ಸಚಿವರನ್ನು ಸಿಬಿಐ ಈಗಾಗಲೇ ವಿಚರಾಣೆಗೊಳಪಡಿಸಿದೆ.

ಇದನ್ನೂ ಓದಿರಿ: ಕಾಡುಹಂದಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಜಲಾಶಯಕ್ಕೆ ಹಾರಿದ ಹಸುಗಳು.. ವಿಡಿಯೋ

ಹಣ ಎಣಿಕೆ ಯಂತ್ರಗಳ ಮೂಲಕ ನಗದು ಎಣಿಕೆಗೆ ಶೋಧ ತಂಡಗಳು ಬ್ಯಾಂಕ್ ಅಧಿಕಾರಿಗಳ ನೆರವು ಪಡೆಯುತ್ತಿವೆ. ಚಟರ್ಜಿ ಅವರಲ್ಲದೆ, ರಾಜ್ಯ ಶಿಕ್ಷಣ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಮತ್ತು ಇತರರ ಮೇಲೂ ಇಡಿ ದಾಳಿ ನಡೆಸಿದೆ.

ಪ್ರಸ್ತುತ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಆರೋಪವಿದೆ.

Last Updated : Jul 22, 2022, 9:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.