ETV Bharat / bharat

ಇಂದು ವಿಚಾರಣೆಗೆ ಹಾಜರಾಗಲು ರಾಹುಲ್​ ಗಾಂಧಿಗೆ ಇಡಿ ಸಮನ್ಸ್​

ನಾಲ್ಕು ದಿನ ವಿಚಾರಣಾ ರಜೆ ಪಡೆದಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಇಡಿ ಸಮನ್ಸ್ ಜಾರಿ ಮಾಡಿದೆ.

ನಾಳೆ ವಿಚಾರಣೆಗೆ ಹಾಜರಾಗಲು ರಾಹುಲ್​ ಗಾಂಧಿಗೆ ಇಡಿ ಸಮನ್ಸ್​

author img

By

Published : Jun 20, 2022, 10:36 PM IST

Updated : Jun 21, 2022, 6:23 AM IST

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಹಗರಣದಲ್ಲಿ ನಡೆಸಲಾಗುತ್ತಿರುವ ವಿಚಾರಣೆಯ ಹಾಜರಾತಿಯಿಂದ 4 ದಿನ ವಿನಾಯಿತಿ ಪಡೆದಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ವಿಚಾರಣೆಗೆ ಬರಲು ಸಮನ್ಸ್​ ಜಾರಿ ಮಾಡಿದ್ದಾರೆ.

ಸತತ ಮೂರು ದಿನ ವಿಚಾರಣೆ ಎದುರಿಸಿದ್ದ ರಾಹುಲ್​ ಗಾಂಧಿ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯ ಕಾರಣ ನೀಡಿ ನಾಲ್ಕು ದಿನ ವಿಚಾರಣೆಯಿಂದ ವಿನಾಯಿತಿ ಪಡೆದಿದ್ದರು. ಇದೀಗ ಸೋನಿಯಾ ಗಾಂಧಿ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಇಂದು ವಿಚಾರಣೆ ಹಾಜರಾಗಲು ರಾಹುಲ್​ಗೆ ಇ.ಡಿ. ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ರಾಹುಲ್​ರನ್ನು ನ್ಯಾಷನಲ್​ ಹೆರಾಲ್ಡ್​ ಹಗರಣದಲ್ಲಿ ಬೇಕಂತಲೇ ಸಿಲುಕಿಸಲು ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸ್ವಾಯತ್ತ ಸಂಸ್ಥೆಯಾದ ಇ.ಡಿ.ಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್​ ಪ್ರತಿಭಟನೆ ನಡೆಸುತ್ತಿದೆ. ನಾಳೆಯಿಂದ ರಾಹುಲ್​ ಗಾಂಧಿ ಅವರು ವಿಚಾರಣೆಗೆ ಒಳಗಾದ ಬಳಿಕ ಮತ್ತೊಂದು ಸುತ್ತಿನ ಪ್ರತಿಭಟನೆ ಕಾಂಗ್ರೆಸ್​ ಸಜ್ಜಾಗಲಿದೆ.

ಇದನ್ನೂ ಓದಿ: ಮೊಸಳೆ ಹಿಡಿದು ಮನೆಗೆ ತಂದಿದ್ದರಂತೆ! 1ನೇ ತರಗತಿ ಪಠ್ಯದಲ್ಲಿದೆ ಬಾಲ ಮೋದಿಯ ಸಾಹಸ

Last Updated : Jun 21, 2022, 6:23 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.