ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮುಂಬೈನಲ್ಲಿ ಭೂಗತ ಪಾತಕಿಗಳಿಗೆ ಸಂಬಂಧಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಸದ್ಯಕ್ಕೆ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಮನೆಗೆ ಅಧಿಕಾರಿಗಳು ಆಗಮಿಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಬೈನ ಸುಮಾರು 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ದಾಖಲಿಸಿದ ಎಫ್ಐಆರ್ ಆಧರಿಸಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಾಳಿ ನಡೆಸಲಾಗುತ್ತಿದ್ದು, ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಈ ದಾಳಿ ಸಂಬಂಧಿಸಿದೆ. ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಹಿರಿಯ ರಾಜಕಾರಣಿಯೊಬ್ಬರು ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
ಇದನ್ನೂ ಓದಿ: ಬಹುಕೋಟಿ ಮೇವು ಹಗರಣದಲ್ಲಿ ಲಾಲು ದೋಷಿ: ಫೆ.21ರಂದು ಶಿಕ್ಷೆ ಪ್ರಕಟ