ಚೆನ್ನೈ: ತಮಿಳುನಾಡಿನ ತಿರುಪತ್ತೂರ್ ಬಳಿಯ ಜವಡುಮಲೈನಲ್ಲಿ ವ್ಯಾನ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ವರದಿ ಪ್ರಕಾರ, ವ್ಯಾನ್‌ನಲ್ಲಿ ಗುಡ್ಡಗಾಡು ಪ್ರದೇಶದಲ್ಲಿದ್ದ ಪುಲಿಯೂರಿನಿಂದ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಇವರೆಲ್ಲ ಸೆಂಬರೈ ಪ್ರದೇಶ ಆಂಜನೇಯಾರ್ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ವ್ಯಾನ್ ಪುದುತ್ನಾಡು ಸಮೀಪ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ 100 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. 11 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲೇ ಆರು ಮಂದಿ ಮೃತಪಟ್ಟರೆ, ಉಳಿದವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅಪಘಾತದ ಸ್ಥಳಕ್ಕೆ ಬಂದು, ರಕ್ಷಣಾ ಕಾರ್ಯ ಕೈಗೊಂಡರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ:ಹೈವೇಯಲ್ಲಿ ಕಾರಿನ ಟಾಪ್ ಮೇಲೆ ನಿಂತು ಡ್ಯಾನ್ಸ್ ಮಾಡುತ್ತ ಹುಚ್ಚಾಟ.. ವಿಡಿಯೋ ವೈರಲ್
ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ: ಆಸ್ಪತ್ರೆಗೆ ವೆಲ್ಲೂರು ಡಿಐಜಿ ವಿಜಯ ಭೇಟಿ ನೀಡಿ ಗಾಯಾಳುಗಳ ಕ್ಷೇಮ ವಿಚಾರಿಸಿದರು, ಈ ನಡುವೆ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದರುವ ತಮಿಳುನಾಡು ಪೊಲೀಸರು ಮರಣ ಹೊಂದಿದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.
ಇದನ್ನು ಓದಿ:ಹಾಡಹಗಲೇ ಬ್ಯಾಂಕ್ ದರೋಡೆ.. ಗನ್ ಪಾಯಿಂಟ್ ಇಟ್ಟು 12 ಲಕ್ಷ ಲೂಟಿ!