ETV Bharat / bharat

ಕಂದಕಕ್ಕೆ ಉರುಳಿ ಬಿದ್ದ ವಾಹನ.. ಶಬರಿಮಲೆಗೆ ತೆರಳುತ್ತಿದ್ದ 8 ಮಂದಿ ಅಯ್ಯಪ್ಪ ಭಕ್ತರ ದುರ್ಮರಣ - Sabarimala pilgrims falls into gorge

ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದ ಭಕ್ತರಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು 8 ಮಂದಿ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ 11 ಗಂಟೆಗೆ ನಡೆದಿದೆ.

sabarimala-pilgrims
ಅಯ್ಯಪ್ಪ ಭಕ್ತರ ದುರ್ಮರಣ
author img

By

Published : Dec 24, 2022, 6:47 AM IST

ಇಡುಕ್ಕಿ(ಕೇರಳ): ಇರುಮುಡಿ ಹೊತ್ತು ಶಬರಿಮಲೆಗೆ ಸಾಗುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಪ್ರಪಾತಕ್ಕೆ ಉರುಳಿ ಬಿದ್ದು 8 ಮಂದಿ ಭಕ್ತರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ 11 ಗಂಟೆಗೆ ನಡೆದಿದೆ. ಶಬರಿಮಲೆಗೆ ಹೋಗುವ ಕುಮಿಲಿ- ಕಂಬಂ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

ಭಕ್ತರಿದ್ದ ವಾಹನ ರಾತ್ರಿ ವೇಳೆ ಸಂಚರಿಸುತ್ತಿದ್ದಾಗ ಅಚಾನಕ್ಕಾಗಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ದುಘರ್ಟನೆಯಲ್ಲಿ 8 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ವಿಷಯ ತಿಳಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಸಮೇತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯ ತಿರುವನ್ನು ಗಮನಿಸದ ಚಾಲಕನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಓದಿ: ದಾವಣಗೆರೆ: ಪ್ರೇಯಸಿಯ ಕೊಲೆ ಮಾಡಿ ತಾನೂ ವಿಷ ಸೇವಿಸಿ ಪ್ರಾಣಬಿಟ್ಟ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.