ETV Bharat / bharat

ಬಾಧಿಸಿದ ಮಗನ ಸಾವಿನ ನೋವು... ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು! - ಸೇಲಂ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನೆ

ವ್ಯಕ್ತಿಯೋರ್ವ ಕ್ಯಾನ್ಸರ್​ನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬದ ನಾಲ್ವರು ಸದಸ್ಯರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

Family members commit suicide
ವಿಷ ಕುಡಿದು ಕುಟುಂಬದ ನಾಲ್ವರ ಸಾವು
author img

By

Published : Dec 7, 2020, 9:42 PM IST

ಸೇಲಂ (ತಮಿಳುನಾಡು): ಮನೆಯ ಹಿರಿಯ ಮಗ ಕ್ಯಾನ್ಸರ್​​ನಿಂದ ಮೃತಪಟ್ಟ ಕಾರಣದಿಂದ ಅದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ.

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು

ಪೊನ್ನಮ್ಮಪೆಟ್ಟೈ ಬಳಿಯ ವಲ್ಕಾಡು ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದೆ. ಸುಮಾರು 15 ವರ್ಷಗಳಿಂದ ಸಲೂನ್​ನಲ್ಲಿ ಕೆಲಸ ಮಾಡುತ್ತಿದ್ದ ಮುರುಗನ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಸುಮಾರು 8 ವರ್ಷದ ಹಿಂದೆ ಮುರುಗನ್ ಹಿರಿಯ ಮಗ ಕ್ಯಾನ್ಸರ್​ನಿಂದ ಸಾವನ್ನಪ್ಪಿದ ಕಾರಣದಿಂದ ಮನನೊಂದ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎನ್ನಲಾಗಿದೆ. ಮನೆಯಿಂದ ಯಾರೂ ಹೊರಗೆ ಬರದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಮ್ಮಾಪೆಟ್ಟೈ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಒಳಗಿನಿಂದ ಲಾಕ್​ ಮಾಡಿದ್ದ ಬಾಗಿಲನ್ನು ಒಡೆದು ಒಳಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮುರುಗನ್, ಆತನ ಪತ್ನಿ ಕೋಕಿಲಾ ಮತ್ತು ಮಕ್ಕಳಾದ ಕುಮಾರ್​ ಮತ್ತು ಕಾರ್ತಿಕ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಸದ್ಯಕ್ಕೆ ಮೃತದೇಹಗಳನ್ನು ಸೇಲಂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಮ್ಮಾಪೆಟ್ಟೈ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.