ನವದೆಹಲಿ : ದೆಹಲಿಯಿಂದ ಅಮೆರಿಕಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಜರುಗಿದೆ.
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಾದ ನ್ಯೂಜೆರ್ಸಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರಾಜೇಂದ್ರ ಪಾಟೀಲ್ ಎಂಬ ಪ್ರಯಾಣಿಕರಿಗೆ ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಉಸಿರಾಟ ತೊಂದರೆ ಉಂಟಾಗಿದೆ. ಈ ವೇಳೆ ಅವರ ಪತ್ನಿ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ವಿಮಾನವನ್ನು ಮರಳಿ ನಿಲ್ದಾಣಕ್ಕೆ ತುರ್ತು ಭೂಸ್ಪರ್ಶ ಮಾಡಿ, ವೈದ್ಯಕೀಯ ಚಿಕಿತ್ಸೆ ಒದಗಿಸಿದರೂ ಅಷ್ಟೊತ್ತಿಗಾಗಲೇ ಆ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ 286 ಜನರು ನ್ಯೂಜೆರ್ಸಿಗೆ ಪ್ರಯಾಣ ಮಾಡುತ್ತಿದ್ದರು. ಘಟನೆ ಬಳಿಕ ಶನಿವಾರ ಸಂಜೆ ತಡವಾಗಿ ವಿಮಾನ ನ್ಯೂಜೆರ್ಸಿಗೆ ಪ್ರಯಾಣ ಬೆಳೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.