ETV Bharat / bharat

ತೆಲಂಗಾಣ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ಸಾಧನೆಗಳ ಜಾಹೀರಾತು: ರಾಜ್ಯ ​ಸರ್ಕಾರಕ್ಕೆ ಚುನಾವಣಾ ಆಯೋಗದ ನೋಟಿಸ್​ - ರಾಜ್ಯ ​ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್​

ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ

ರಾಜ್ಯ ​ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್​
ರಾಜ್ಯ ​ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್​
author img

By ETV Bharat Karnataka Team

Published : Nov 27, 2023, 9:54 PM IST

Updated : Nov 27, 2023, 10:38 PM IST

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಸರ್ಕಾರಕ್ಕೆ ನೋಟೀಸ್​ ಜಾರಿ ಮಾಡಿದೆ. ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳನ್ನು ಜಾಹೀರಾತು ನೀಡಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಚುನಾವಣಾ ಸಂದರ್ಭದಲ್ಲಿ ನೆರೆಯ ರಾಜ್ಯದಲ್ಲಿ ಜಾಹೀರಾತು ನೀಡುವುದು ಚುನಾವಣಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಈ ಸಂಬಂಧ ಮಂಗಳವಾರ ಸಂಜೆ 5 ಗಂಟೆಯೊಳಗೆ ವಿವರಣೆ ನೀಡುವಂತೆ ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಪತ್ರದಲ್ಲಿ ಜಾಹೀರಾತುಗಳನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ. ಪ್ರಕಟಣೆ ಹೊರಡಿಸಿರುವ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ತೆಲಂಗಾಣದಲ್ಲಿ ಜಾಹೀರಾತು ನೀಡುವ ಕುರಿತು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.

ಬಿಜೆಪಿ ದೂರು: ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳು ಬರುತ್ತಿವೆ ಎಂದು ಬಿಜೆಪಿ ನಾಯಕರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಸ್ಥಳೀಯ ಮಾಧ್ಯಮಗಳಲ್ಲಿ ಕರ್ನಾಟಕ ಸರ್ಕಾರದ ಸಾಧನೆಗಳ ಜಾಹೀರಾತು ಪ್ರಸಾರವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿ ಈ ಕುರಿತು ಕಾಂಗ್ರೆಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್, ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಅವರನ್ನೊಳಗೊಂಡ ಗುಂಪು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕಾಂಗ್ರೆಸ್ ಪಕ್ಷವು ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರ್ಕಾರವು ತೆಲಂಗಾಣದ ಇಂಗ್ಲಿಷ್ ಮತ್ತು ಪ್ರಾದೇಶಿಕ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಈ ವಿಚಾರವಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಬಳಿಕ ಓಂ ಪಾಠಕ್​ ಅವರು, ಕಾಂಗ್ರೆಸ್ ಪಕ್ಷವು ಸಾರ್ವಜನಿಕ ಹಣವನ್ನು ಬಳಸಿಕೊಂಡು ಬೇರೆ ರಾಜ್ಯದ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಓಂ ಪಾಠಕ್ ಚುನಾವಣಾ ಆಯೋಗಕ್ಕೆ ವಿನಂತಿಸಿದ್ದಾರೆ. ಬಿಜೆಪಿ ನಾಯಕರ ದೂರಿಗೆ ಸ್ಪಂದಿಸಿರುವ ಆಯೋಗ ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: 'ರೈತಬಂಧು' ಆರ್ಥಿಕ ನೆರವು ಬಿಡುಗಡೆ ಅನುಮತಿ ಹಿಂಪಡೆದ ಚುನಾವಣಾ ಆಯೋಗ

Last Updated : Nov 27, 2023, 10:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.