ETV Bharat / bharat

ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ: ಉದ್ಧವ್ ಠಾಕ್ರೆ - ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಉದ್ಧವ್

ಮಹಾರಾಷ್ಟ್ರದಲ್ಲಿ ಯಾವಾಗ ಬೇಕಾದರೂ ಚುನಾವಣೆಗಳು ನಡೆಯಬಹುದು, ನಾವು ಸಿದ್ಧರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

uddhav thackeray
ಉದ್ಧವ್ ಠಾಕ್ರೆ
author img

By

Published : Apr 24, 2023, 10:25 AM IST

ಜಲಗಾಂವ್ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಬಂಡಾಯವೆದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇದೆ. ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶಾಕಿಂಗ್​ ಹೇಳಿಕೆಯೊಂದನ್ನು ನೀಡಿದ್ದು, ಶಿಂಧೆ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಯಾವುದೇ ಸಮಯದಲ್ಲಿ ಬೇಕಾದರೂ ಚುನಾವಣೆ ನಡೆಯಬಹುದು ಎಂದಿದ್ದಾರೆ.

ಭಾನುವಾರ ಜಲಗಾಂವ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, "ಮಹಾರಾಷ್ಟ್ರದಲ್ಲಿ ಚುನಾವಣೆಗಳು ಯಾವಾಗ ಬೇಕಾದರೂ ನಡೆಯಬಹುದು, ನಾವು ಸಿದ್ಧರಾಗಿದ್ದೇವೆ. 16 ಶಿಂಧೆ ಪಕ್ಷದ ಶಾಸಕರ ಅನರ್ಹ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ ಮತ್ತು ಅಂತಿಮ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂದು ಆಶಾದಾಯಕವಾಗಿದ್ದೇವೆ. ಕೋರ್ಟ್​ ತೀರ್ಪಿನ ಬಳಿಕ ಏನು ಬೇಕಾದರೂ ಆಗಬಹುದು" ಎಂದರು.

ಬಳಿಕ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ ಉದ್ಧವ್, "ನಿಮಗೆ ನಿಮ್ಮದೇ ಆದ ಯಾವುದೇ ಆದರ್ಶವಿಲ್ಲ. ಆದ್ದರಿಂದ ನೀವು ಇತರರ ಆದರ್ಶಗಳನ್ನು ಮತ್ತು ಬೇರೆಯವರೊಬ್ಬರ ತಂದೆ-ತಾಯಿಯ ಹೆಸರನ್ನು ಕಸಿದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಿ. ನಾನು ಈ ಹಿಂದೆಯೇ ಬಿಜೆಪಿಗೆ ಸವಾಲು ಹಾಕಿದ್ದೇನೆ. ಮುಂಬರುವ ಚುನಾವಣೆಯನ್ನು ಏಕನಾಥ್ ಶಿಂಧೆ ನೇತೃತ್ವದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಲು ನಾನು ಬಿಜೆಪಿ ಅವರಿಗೆ ಧೈರ್ಯ ನೀಡುತ್ತೇನೆ" ಎಂದು ಹೇಳಿದರು.

ಇದನ್ನೂ ಓದಿ : ಆಟೋರಿಕ್ಷಾ ಮರ್ಸಿಡಿಸ್​ ಕಾರನ್ನು ಮೀರಿಸಿದೆ: ಉದ್ಧವ್​ ಠಾಕ್ರೆಗೆ ಸಿಎಂ ಶಿಂದೆ ತಿರುಗೇಟು

ಇನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಕೂಡ ನಿನ್ನೆ " ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮುಂದಿನ 15 - 20 ದಿನಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ 16 ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ರಾಜ್ಯಸಭಾ ಸದಸ್ಯರು ಉಲ್ಲೇಖಿಸಿದ್ದಾರೆ. ತಮ್ಮ ಪಕ್ಷವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದೆ. ಈಗ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಶಿಂಧೆ ಮತ್ತು ಅವರ 40 ಶಾಸಕರ ಸರ್ಕಾರ 15 - 20 ದಿನಗಳಲ್ಲಿ ಪತನವಾಗಲಿದೆ. ಈ ಸರ್ಕಾರದ ಡೆತ್ ವಾರಂಟ್ ಹೊರಡಿಸಲಾಗಿದೆ. ಇದಕ್ಕೆ ಯಾರು ಸಹಿ ಹಾಕುತ್ತಾರೆ ಎಂಬುದನ್ನು ಈಗ ನಿರ್ಧರಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ : ಶಿಂಧೆ ನೇತೃತ್ವದ ಮಹಾ ಸರ್ಕಾರ 15 ರಿಂದ 20 ದಿನಗಳಲ್ಲಿ ಪತನ: ಸಂಜಯ್ ರಾವತ್

ಕಳೆದ ವರ್ಷದ ಜೂನ್‌ ತಿಂಗಳಲ್ಲಿ ಶಿಂಧೆ ಮತ್ತು 39 ಶಾಸಕರು ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು. ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ (ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿದೆ) ವಿಭಜನೆ ಮತ್ತು ಪತನಗೊಂಡಿತ್ತು.

ಇದನ್ನೂ ಓದಿ : ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ಉದ್ದೇಶ: ಉದ್ಧವ್​ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.