ಕೀವ್, ರಷ್ಯಾ: ಉಕ್ರೇನ್‌ನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ರಷ್ಯಾ ನಿರಂತರವಾಗಿ ದಾಳಿ ನಡೆಸುತ್ತಿದೆ. ಅಲ್ಲಿನ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರಿ ಕಚೇರಿ ನಮ್ಮ ದೇಶದ ಉಕ್ರೇನ್ ವಾಸಿಗಳಿಗೆ ಸಲಹೆ ಸೂಚನೆ ನೀಡಿದೆ. ಭಾರತೀಯ ರಾಯಭಾರ ಕಚೇರಿಯು ಭಾರತದ ನಾಗರಿಕರಿಗೆ ಉಕ್ರೇನ್‌ಗೆ ಪ್ರಯಾಣಿಸದಂತೆ ಸಲಹೆ ನೀಡಿದೆ. ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರಿಗೆ ಉಕ್ರೇನ್‌ನಿಂದ ಬೇಗನೆ ಹೊರಹೋಗುವಂತೆ ರಾಯಭಾರ ಕಚೇರಿ ಸೂಚನೆ ನೀಡಿದೆ.
-
Advisory for Indian Nationals@MEAIndia @DDNewslive @DDNational @PIB_India @IndianDiplomacy pic.twitter.com/bu4IIY1JNt
— India in Ukraine (@IndiainUkraine) October 19, 2022 " class="align-text-top noRightClick twitterSection" data="
">Advisory for Indian Nationals@MEAIndia @DDNewslive @DDNational @PIB_India @IndianDiplomacy pic.twitter.com/bu4IIY1JNt
— India in Ukraine (@IndiainUkraine) October 19, 2022Advisory for Indian Nationals@MEAIndia @DDNewslive @DDNational @PIB_India @IndianDiplomacy pic.twitter.com/bu4IIY1JNt
— India in Ukraine (@IndiainUkraine) October 19, 2022
ಬುಧವಾರ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನ ಲುಹಾನ್ಸ್ಕ್, ಡೊನೆಟ್ಸ್ಕ್, ಜಪೋರಿಜ್ಜ್ಯಾ ಮತ್ತು ಖೆರ್ಸನ್ ಪ್ರದೇಶಗಳಲ್ಲಿ ಸಮರ ಕಾನೂನನ್ನು ಘೋಷಿಸಿದ್ದಾರೆ. ಸಮರ ಕಾನೂನಿನ ಘೋಷಣೆಯ ನಂತರ ರಷ್ಯಾದ ಎಲ್ಲ ಪ್ರದೇಶಗಳ ಮುಖ್ಯಸ್ಥರು ಹೆಚ್ಚುವರಿ ತುರ್ತು ಅಧಿಕಾರವನ್ನು ಪಡೆದಿದ್ದಾರೆ.
ವ್ಲಾಡಿಮಿರ್ ಪುಟಿನ್ ಹೇಳಿದ್ದೇನು?: ರಷ್ಯಾದ ಒಕ್ಕೂಟದ ಈ ನಾಲ್ಕು ಪ್ರದೇಶಗಳಲ್ಲಿ ಸಮರ ಕಾನೂನನ್ನು ಪರಿಚಯಿಸಲು ನಾನು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದೇನೆ ಎಂದು ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆಯಲ್ಲಿ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದಾರೆ. ಅದರ ನಂತರ ಕ್ರೆಮ್ಲಿನ್ ಗುರುವಾರದ ಆರಂಭದಿಂದ ಈ ಪ್ರದೇಶಗಳಲ್ಲಿ ಮಾರ್ಷಲ್ ಲಾ ಜಾರಿಗೊಳಿಸಲಾಗುವುದು ಎಂದು ಪ್ರಕಟಿಸಿತು.
ಅಂತಾರಾಷ್ಟ್ರೀಯ ನಿಯಮಗಳ ಉಲ್ಲಂಘನೆ: ರಷ್ಯಾದ ಈ ನಡೆಯನ್ನು ಅಂತಾರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ. ಈ ನಾಲ್ಕು ಪ್ರದೇಶಗಳನ್ನು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ರಷ್ಯಾಕ್ಕೆ ಇನ್ನೂ ಸಾಧ್ಯವಾಗಿಲ್ಲ. ಉಕ್ರೇನ್ ಸೇನೆಯಿಂದ ರಷ್ಯಾ ಕಠಿಣ ಸ್ಪರ್ಧೆಯನ್ನು ಎದುರಿಸುತ್ತಿದೆ.
ಉಕ್ರೇನ್ ಮೇಲಿನ ದಾಳಿಗಳು ಉಲ್ಬಣ: ಇತ್ತೀಚೆಗೆ, ರಷ್ಯಾದಿಂದ ಉಕ್ರೇನ್ ಮೇಲೆ ದಾಳಿಗಳು ತೀವ್ರಗೊಂಡಿವೆ. ಸೋಮವಾರ (ಅಕ್ಟೋಬರ್ 17) ಉಕ್ರೇನ್‌ನ ಹಲವು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಡ್ರೋನ್ ದಾಳಿಯಲ್ಲಿ ಗರ್ಭಿಣಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಹೇಳಿದೆ. ಇದಕ್ಕೂ ಮೊದಲು ಅಕ್ಟೋಬರ್ 10 ರಂದು ಉಕ್ರೇನ್‌ನಲ್ಲಿ ರಷ್ಯಾದಿಂದ ಸುಮಾರು 84 ಕ್ಷಿಪಣಿಗಳನ್ನು ಹಾರಿಸಲಾಗಿತ್ತುಈ ದಾಳಿಯಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ತಿಳಿಸಿದೆ.
ಓದಿ: ಮತ್ತೆ ಉದ್ವಿಗ್ನ ಸ್ಥಿತಿ.. ಉಕ್ರೇನ್‌ಗೆ ತೆರಳದಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ