ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹೈಫ್ ಶರ್ಮಲ್ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಶೋಪಿಯಾನ್‌ನ ಹೈಫ್ ಶಿರ್ಮಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳ ಯೋಧರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಮಧ್ಯದ ಎನ್ಕೌಂಟರ್ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಇದನ್ನೂ ಓದಿ: ಆಸ್ತಿ ಮುಟ್ಟುಗೋಲು: ಭಯೋತ್ಪಾದಕರ ವಿರುದ್ಧ ಕಾಶ್ಮೀರ ಪೊಲೀಸರ ಗದಾಪ್ರಹಾರ