ಅವಂತಿಪೋರಾ(ಜಮ್ಮು-ಕಾಶ್ಮೀರ): ಇಲ್ಲಿನ ಅವಂತಿಪೋರಾದ ಟ್ರಾಲ್ ಪ್ರದೇಶದ ನೌಬಗ್‌ನಲ್ಲಿ ಮತ್ತು ಶೋಪಿಯಾನ್‌ನಲ್ಲಿ ಇಂದು ಬೆಳಿಗ್ಗೆಯಿಂದ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 5 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು,"ಅವಂತಿಪೋರಾದ ಟ್ರಾಲ್ ಪ್ರದೇಶದ ನೌಬಗ್ನ ಕಾರ್ಯಾಚರಣೆ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ" ಎಂದು ಹೇಳಿದ್ದಾರೆ.
ಪೊಲೀಸ್ ಮತ್ತು ಸೇನೆಯ ಜಂಟಿ ತಂಡವು ಈ ಪ್ರದೇಶವನ್ನು ಸುತ್ತುವರೆದಿದ್ದು ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಇನ್ನು ಕಳೆದ ರಾತ್ರಿಯಿಂದಲೇ ಶೋಪಿಯಾನ್‌ನಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಒಟ್ಟಾರೆ ಇಲ್ಲಿವರೆಗೆ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.