ETV Bharat / bharat

ಎನ್​ಕೌಂಟರ್​ನಲ್ಲಿ 9 ಮಂದಿ ನಕ್ಸಲರ ಬೇಟೆ: ಐವರು ಯೋಧರು ಹುತಾತ್ಮ - Five security personnel killed

ಛತ್ತೀಸ್​ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಯ ಐವರು ಯೋಧರು ಹುತಾತ್ಮರಾಗಿದ್ದಾರೆ. 9 ಮಂದಿ ನಕ್ಸಲರನ್ನು ಈ ವೇಳೆ ಹೊಡೆದುರುಳಿಸಲಾಗಿದೆ.

Five security personnel killed
Five security personnel killed
author img

By

Published : Apr 3, 2021, 10:26 PM IST

ಬಿಜಾಪುರ್​(ಛತ್ತೀಸ್​ಗಢ) : ನಕ್ಸಲರು-ಯೋಧರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿದ್ದರೆ, 9 ಮಂದಿ ನಕ್ಸಲರು ಹತರಾಗಿದ್ದಾರೆ. ಉಳಿದಂತೆ 12 ಮಂದಿ ಸೈನಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ನಕ್ಸಲ್​ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆ ತೆರಳಿದ್ದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ.

ಶನಿವಾರ ಬೆಳಗ್ಗೆಯಿಂದಲೇ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಎನ್​ಕೌಂಟರ್​ ನಡೆದಿತ್ತು. ಹುತಾತ್ಮರಾದ ಯೋಧರಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪಡೆಗೆ ಸೇರಿದ್ದು, ಉಳಿದವರು ಜಿಲ್ಲಾ ರಿಸರ್ವ್​ ಗಾರ್ಡ್​​(DRG)ನವರು ಎಂದು ತಿಳಿದು ಬಂದಿದೆ.

ಮಾಹಿತಿ ನೀಡಿದ ನಕ್ಸಲ್ ನಿಗ್ರಹ ದಳದ ಡಿಐಜಿ

ಬಿಜಾಪುರದ ಸುಕ್ಮಾ ಬಾರ್ಡರ್​​ನಲ್ಲಿ ಅಡಗಿ ಕುಳಿತಿದ್ದ ನಕ್ಸಲರ ವಿರುದ್ಧ ಸಿಆರ್​​​ಪಿಎಫ್​​, ಡಿಆರ್​ಜಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ನಕ್ಸಲರು ಏಕಾಏಕಿಯಾಗಿ ಗುಂಡಿನ ದಾಳಿ ನಡೆಸಿದ್ದರಿಂದ ಈ ಘಟನೆ ನಡೆದಿದೆ ಎಂದು ಡಿಜಿಪಿ ಡಿಎಂ ಅವಾಸ್ಥಿ ತಿಳಿಸಿದ್ದಾರೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ಕಾರ್ಯಾಚರಣೆಯಲ್ಲಿ 9 ಮಂದಿ ನಕ್ಸಲರು ಸಾವನ್ನಪ್ಪಿದ್ದರೆ, 15ಕ್ಕೂ ಹೆಚ್ಚು ನಕ್ಸಲರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆ ಸ್ಥಳದಲ್ಲಿ 250ಕ್ಕೂ ಅಧಿಕ ನಕ್ಸಲರು ಇದ್ದರು ಎಂದು ಬಸ್ತಾರ್​ ಐಜಿ ಪಿ. ಸುಂದರ್​ರಾಜ್​ ಮಾಹಿತಿ ನೀಡಿದ್ದಾರೆ.

  • According to initial information, at least 9 more Naxals have been killed and around 15 others were injured in the encounter. We will need more time to confirm this. As per our estimates, there were 250 Naxalites there: P Sundarraj, IG Bastar pic.twitter.com/28r5a6a8Z2

    — ANI (@ANI) April 3, 2021 " class="align-text-top noRightClick twitterSection" data=" ">

ಚಿಕಿತ್ಸೆಗೆ ಎಲ್ಲ ರೀತಿಯ ಸೌಲಭ್ಯ: ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮುಖ್ಯಮಂತ್ರಿ ಭೂಪೇಶ್ ಬಾಘೇಲ್​​, ಗಾಯಗೊಂಡಿರುವ ಯೋಧರಿಗೆ ಎಲ್ಲ ರೀತಿಯ ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಇಂಡಿಯನ್​ ಏರ್​ಪೋರ್ಸ್​​ನ ಮಿಗ್​-17 ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ ಎಂದು ತಿಳಿದು ಬಂದಿದೆ. ​​

  • My thoughts are with the families of those martyred while fighting Maoists in Chhattisgarh. The sacrifices of the brave martyrs will never be forgotten. May the injured recover at the earliest.

    — Narendra Modi (@narendramodi) April 3, 2021 " class="align-text-top noRightClick twitterSection" data=" ">

ಪ್ರಧಾನಿ ಮೋದಿ ಸಂತಾಪ: ನಕ್ಸಲ್​ ಅಟ್ಟಹಾಸದಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ನಕ್ಸಲರ ವಿರುದ್ಧ ಹೋರಾಡುವಾಗ ಹುತಾತ್ಮರಾದ ಯೋಧರ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ. ಧೈರ್ಯಶಾಲಿ ಹುತಾತ್ಮ ಯೋಧರ ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.