ಜಮ್ಮು ಮತ್ತು ಕಾಶ್ಮೀರ : ಪುಲ್ವಾಮಾದ ಮಿಟ್ರಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿ ಕಾರ್ಯಚರಣೆ ಪ್ರಾರಂಭಿಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.
-
#Encounter has started at Mitrigam area of #Pulwama. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) March 17, 2023 " class="align-text-top noRightClick twitterSection" data="
">#Encounter has started at Mitrigam area of #Pulwama. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) March 17, 2023#Encounter has started at Mitrigam area of #Pulwama. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) March 17, 2023
ಕಳೆದ ಫೆಬ್ರವರಿ 28 ರಂದು ಪುಲ್ವಾಮಾದಲ್ಲಿ ನಡೆದ ಕಾಶ್ಮೀರಿ ಪಂಡಿತನ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹತ್ಯೆ ಮಾಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದರು. ಪುಲ್ವಾಮಾ ಜಿಲ್ಲೆಯ ಅವಂತಿಪೋರ್‌ನ ಪದಗಂಪೋರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪುಲ್ವಾಮಾದ ಉಗ್ರಗಾಮಿ ಆದಿಲ್ ಮುಷ್ತಾಕ್ ಭಟ್ ಹತನಾಗಿದ್ದಾನೆ. ಈತ ಅಕಿಬ್ ಎ ವರ್ಗದ ಉಗ್ರಗಾಮಿಯಾಗಿದ್ದು, ಆರಂಭದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಜತೆ ಕೆಲಸ ಮಾಡುತ್ತಿದ್ದ. ಆದರೆ, ಇತ್ತೀಚಿನ ದಿನಗಳಲ್ಲಿ ಟಿಆರ್ಎಫ್ ಜೊತೆ ಕೆಲಸ ಮಾಡುತ್ತಿದ್ದ ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದರು.
ಇದನ್ನೂ ಓದಿ : ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ದಾಳಿ.. ಓರ್ವ ಬಲಿ, ಮತ್ತೋರ್ವನ ಸ್ಥಿತಿ ಗಂಭೀರ
ಫೆಬ್ರವರಿ 26 ರಂದು ಕಾಶ್ಮೀರಿ ಪಂಡಿತ (ಸಂಜಯ್ ಶರ್ಮಾ) ಅವರು ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪರಿಚಿತ ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಶರ್ಮಾ ಅವರು ಖಾಸಗಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ : ಕಾಶ್ಮೀರಿ ಪಂಡಿತರಿಗೆ ಗುಂಡಿಕ್ಕಿ ಕೊಂದಿದ್ದ ಮೂವರು ಉಗ್ರರನ್ನು ಬೇಟೆಯಾಡಿದ ಭದ್ರತಾ ಪಡೆ
ಕುಲ್ಗಾಮ್ ಎನ್‌ಕೌಂಟರ್.. : ಇನ್ನು ಕಳೆದ ಫೆ. 23ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೊಸರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಟ್ವಿಟರ್‌ನಲ್ಲಿ ಕಾಶ್ಮೀರ ವಲಯ ಪೊಲೀಸರು ಮಾಹಿತಿ ಹಂಚಿಕೊಂಡಿದ್ದರು, "ಕುಲ್ಗಾಮ್ ಜಿಲ್ಲೆಯ ಕೊಸರ್ನಾಗ್‌ನ ಇಸ್ತಾನ್ ಮಾರ್ಗ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರಗಾಮಿ ಸಾವನ್ನಪ್ಪಿದ್ದಾನೆ. ಹುಡುಕಾಟ ಇನ್ನೂ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ" ಬರೆಯಲಾಗಿತ್ತು.
ಇದನ್ನೂ ಓದಿ : ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಓರ್ವ ಉಗ್ರ ಹತ
ಜೊತೆಗೆ, ಫೆಬ್ರವರಿ 22 ರಂದು ಸಹ ಬಾರಾಮುಲ್ಲಾದ ಶೆರಿಚಂದೋಸಾ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ಸಮಯದಲ್ಲಿ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡಿನ ಚಕಮಕಿ ನಡೆಸಿದ್ದು, ಸೇನಾ ಸಿಬ್ಬಂದಿ ಗಾಯಗೊಂಡಿದ್ದರು.
ಇದನ್ನೂ ಓದಿ : ಗನ್ ಜಪ್ತಿಗೆ ಹೋದಾಗ ಪೊಲೀಸರತ್ತ ಗುಂಡಿನ ದಾಳಿ: ಆರೋಪಿ ಮೇಲೆ ಪ್ರತಿದಾಳಿ, ಕಾಲಿಗೆ ಗುಂಡೇಟು