ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶಿರ್ಮಲ್ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
"ಶೋಪಿಯಾನ್‌ನ ಶಿರ್ಮಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಜೈನಪೋರಾ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನಾಕಾ ಪಾರ್ಟಿಯಲ್ಲಿ ಸೋಮವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸಿಆರ್‌ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.