ಬುದ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚರಾರ್-ಇ-ಶರೀಫ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಬುಡ್ಗಾಮ್‌ನ ಚರಾರ್-ಇ-ಶರೀಫ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ಗಂದೇರ್ಬಲ್ ಪೊಲೀಸರು ಮತ್ತು ಸಿಆರ್‌ಪಿಎಫ್ ತಂಡಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಇವರು ನಿಷೇಧಿತ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ), ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಗೆ ಸೇರಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನಿಲ್ಲದ ಉಗ್ರರ ಅಟ್ಟಹಾಸ : ಭಯೋತ್ಪಾದಕರ ದಾಳಿಗೆ ಹಿರಿಯ ಪೊಲೀಸ್ ಪೇದೆ ಹುತಾತ್ಮ