ETV Bharat / bharat

ಹಳ್ಳಿಯೊಂದರಲ್ಲಿ ಅವಿತಿರುವ ಉಗ್ರರು, ಭದ್ರತಾ ಪಡೆಗಳಿಂದ ಕಾರ್ಯಾಚರಣೆ - ಜಮ್ಮು ಕಾಶ್ಮೀರದಲ್ಲಿ ಎನ್​ಕೌಂಟರ್​

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ..

Encounter breaks out in south Kashmir's Pulwama
ಹಳ್ಳಿಯೊಂದರಲ್ಲಿ ಅವಿತಿರುವ ಉಗ್ರರು, ಭದ್ರತಾ ಪಡೆಗಳಿಂದ ಕಾರ್ಯಾಚರಣೆ
author img

By

Published : Mar 15, 2022, 11:50 AM IST

ಶ್ರೀನಗರ, ಜಮ್ಮು ಕಾಶ್ಮೀರ : ಉಗ್ರರ ವಿರುದ್ಧ ಜಮ್ಮು- ಕಾಶ್ಮೀರದ ಅವಂತಿಪೋರಾದ ಚಾರ್ಸೂ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಜಮ್ಮು-ಕಾಶ್ಮೀರದ ಪೊಲೀಸ್​ನ ವಿಶೇಷ ವಕ್ತಾರರು ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀನಗರ-ಜಮ್ಮು ಹೆದ್ದಾರಿಯ ಉದ್ದಕ್ಕೂ ಇರುವ ಗ್ರಾಮದಲ್ಲಿ ಉಗ್ರಗಾಮಿಗಳಿರುವ ಬಗ್ಗೆ ಸುಳಿವು ಸಿಕ್ಕ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸದ್ಯಕ್ಕೆ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಇಂಟರ್​ನೆಟ್​​ ಸೌಲಭ್ಯ: ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.