ETV Bharat / bharat

ಸೊಪೊರಾ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತ, ಮೂವರು ಪರಾರಿ

ಜಮ್ಮು- ಕಾಶ್ಮೀರದ ಸೊಪೊರಾದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದು, ಮೂವರು ಪರಾರಿಯಾಗಿದ್ದಾರೆ. ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

encounter-has-started-in-sopore
ಜಮ್ಮು- ಕಾಶ್ಮೀರದಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಆರಂಭ
author img

By

Published : Jun 6, 2022, 8:36 PM IST

Updated : Jun 6, 2022, 11:03 PM IST

ಸೊಪೊರಾ(ಜಮ್ಮು ಕಾಶ್ಮೀರ): ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರಾ ಪಾನಿಪೋರಾ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಘರ್ಷಣೆಯಲ್ಲಿ ಎಲ್‌ಇಟಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇನ್ನೂ ಮೂವರು ಉಗ್ರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಸಂಜೆ ವೇಳೆ ಗುಂಡಿನ ಚಕಮಕಿ ಆರಂಭವಾಗಿತ್ತು. ಸೊಪೊರಾದ ಪನಿಪೋರಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಮಾಹಿತಿಯ ಮೇರೆಗೆ ಜಂಟಿ ಕಾರ್ಯಾಚರಣೆಗೆ ಇಳಿದ ಪೊಲೀಸ್​ ಹಾಗೂ ಸೇನಾ ಪಡೆಗಳು ಉಗ್ರರನ್ನು ಬೇಟೆಯಾಡಲು ಕಾರ್ಯಾಚರಣೆ ಆರಂಭಿಸಿದ್ದರು. ಇದರಲ್ಲಿ ಓರ್ವ ಎಲ್​ಇಟಿ ವಿದೇಶಿ ಉಗ್ರನನ್ನು ಗುಂಡಿಕ್ಕಿ ಬೇಟೆಯಾಡಿದ್ದಾರೆ. ಇನ್ನೂ ಮೂವರು ಪರಾರಿಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

ಹತ್ಯೆಗೀಡಾದ ಉಗ್ರನಿಂದ ಮದ್ದುಗುಂಡುಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಘರ್ಷಣೆಯಲ್ಲಿ ಒಬ್ಬ ಸ್ಥಳೀಯ ಮತ್ತು ಇಬ್ಬರು ಸ್ಥಳೀಯೇತರ ಉಗ್ರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ: 2006 ರ ವಾರಣಾಸಿ ಬಾಂಬ್ ಸ್ಫೋಟ ಪ್ರಕರಣ.. ಉಗ್ರನಿಗೆ ಮರಣದಂಡನೆ ಶಿಕ್ಷೆ ಪ್ರಕಟ

Last Updated : Jun 6, 2022, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.