ಪುಲ್ವಾಮಾ(ಜಮ್ಮು- ಕಾಶ್ಮೀರ): ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಮೊರೆತ ಶುರುವಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದ್ರಾಬ್ಗಾಮ್ ಎಂಬಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ದ್ರಾಬ್ಗಾಮ್ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪಡೆದ ಸ್ಥಳೀಯ ಪೊಲೀಸ್ ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಲು ಮುಂದಾದಾಗ, ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಉಗ್ರರನ್ನು ಹೆಡೆಮುರಿ ಕಟ್ಟಲು ಗುಂಡಿನ ಮೂಲಕವೇ ಪ್ರತ್ಯುತ್ತರ ನೀಡುತ್ತಿದ್ದಾರೆ. ಈ ವೇಳೆ ಸೈನಿಕರು ಉಗ್ರನ ಸದ್ದಡಗಿಸಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ.
ಓದಿ: ಉತ್ತರಪ್ರದೇಶದಲ್ಲಿ ಗಲಭೆ ಸೃಷ್ಟಿಸಿದ 227 ಜನರ ಬಂಧನ.. ಕಠಿಣ ಕ್ರಮಕ್ಕೆ ಸಿಎಂ ಯೋಗಿ ಸೂಚನೆ