ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಶ್ರೀಗುಲ್ಫ್ವಾರ ಬಳಿಯ ಶಾಲ್ಗುಲ್ ಫಾರೆಸ್ಟ್ ಪ್ರದೇಶದಲ್ಲಿ ಉಗ್ರರು ಮತ್ತು ಸಿಆರ್ಪಿಎಫ್ ಯೋಧರ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.
ಫೆ. 19 ರಂದು, ಶೋಪಿಯಾನ್ ಜಿಲ್ಲೆಯ ಬಡಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ - ಎ - ತೊಯ್ಬಾ (ಎಲ್‌ಇಟಿ) ಯೊಂದಿಗೆ ಸಂಯೋಜಿತಗೊಂಡಿದ್ದ ಮೂವರು ಉಗ್ರರ ಸಹಚರರನ್ನು ಎನ್ಕೌಂಟರ್ ಮಾಡಲಾಗಿತ್ತು.