ರಾಜೌರಿ(ಜಮ್ಮು-ಕಾಶ್ಮೀರ): ಉಗ್ರರು-ಭಾರತೀಯ ಸೇನೆ ನಡುವೆ ಗುಂಡಿನ ಕಾಳಗ ಆರಂಭಗೊಂಡಿದ್ದು, ಈ ವೇಳೆ ಓರ್ವ JCO ಹುತಾತ್ಮರಾಗಿದ್ದು, ಉಳಿದಂತೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಈ ಘಟನೆ ನಡೆದಿದೆ.
ರಾಜೌರಿಯ ಬಿಂಬರ್ ಗಾಲಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಯುತ್ತಿದ್ದು, ಭಾರತೀಯ ಸೇನೆ ಮತ್ತೋರ್ವ ಸೇನಾಧಿಕಾರಿಗೆ ಕಳೆದುಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಪೂಂಚ್ ಪ್ರದೇಶದಲ್ಲಿ ನಡೆದಿದ್ದ ಗುಂಡಿನ ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ ಐವರು ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದರು.
ಇದನ್ನೂ ಓದಿರಿ: ಫೇಸ್ಬುಕ್ ಗೆಳತಿ ನಂಬಿ ಕೆಟ್ಟ ವ್ಯಕ್ತಿ.. ಅಶ್ಲೀಲ ವಿಡಿಯೋ ಮಾಡಿ ಬ್ಲಾಕ್ಮೇಲ್!
ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಅನೇಕ ಉಗ್ರರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ವೇಳೆ ಅನೇಕ ಯೋಧರು ಗುಂಡಿನ ದಾಳಿಗೆ ಬಲಿಯಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.