ETV Bharat / bharat

ಶಿವರಾಜ್​ ಸಿಂಗ್​​ ಚೌಹಾಣ್​ ಯುಗಾಂತ್ಯ: ಪಕ್ಷ ಅಧಿಕಾರದಲ್ಲಿ ಪ್ರತಿಷ್ಠಾಪಿಸಿ ನಿರ್ಗಮಿಸಿದ ಮಾಜಿ ಸಿಎಂ - ETV bharat kannada

ಮಧ್ಯಪ್ರದೇಶದಲ್ಲಿ ಬಿಜೆಪಿಯ ಕೋಟೆಯನ್ನು ಮತ್ತಷ್ಟು ಬಲಪಡಿಸಿ ಶಿವರಾಜ್​ ಸಿಂಗ್​ ಚೌಹಾಣ್​ ತಮ್ಮ ಸ್ಥಾನದಿಂದ ನಿರ್ಗಮಿಸಿದರು.

ಶಿವರಾಜ್​ ಸಿಂಗ್​​ ಚೌಹಾಣ್​ ಯುಗಾಂತ್ಯ
ಶಿವರಾಜ್​ ಸಿಂಗ್​​ ಚೌಹಾಣ್​ ಯುಗಾಂತ್ಯ
author img

By ETV Bharat Karnataka Team

Published : Dec 12, 2023, 4:16 PM IST

ಭೋಪಾಲ್ (ಮಧ್ಯಪ್ರದೇಶ) : ಹಿಂದಿ ರಾಜ್ಯಗಳ ಹೃದಯಭಾಗವಾದ ಮಧ್ಯಪ್ರದೇಶದಲ್ಲಿ ನಾಲ್ಕು ಬಾರಿ ಸಿಎಂ ಆಗಿ ರಾಜ್ಯಭಾರ ಮಾಡಿದ್ದ ಶಿವರಾಜ್​ ಸಿಂಗ್​ ಚೌಹಾಣ್​ ಯುಗ ಅಂತ್ಯಗೊಂಡಿತು. ಹೆಚ್ಚೂ ಕಡಿಮೆ 2 ದಶಕಗಳ ಕಾಲ ಸಿಎಂ ಆಗಿದ್ದ ಎಲ್ಲರ ಪ್ರೀತಿಯ 'ಮಾಮಾ' ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ತಲೆಮಾರಿನ ನಾಯಕರಾದ ಮೋಹನ್​ ಯಾದವ್​ ಅವರನ್ನು ಬಿಜೆಪಿ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ.

ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕಳೆದ ಎರಡು ದಶಕಗಳಲ್ಲಿ ಮಧ್ಯಪ್ರದೇಶದ ಜನರು ನೀಡಿದ ಬೆಂಬಲಕ್ಕಾಗಿ ಮಂಗಳವಾರ ಕೃತಜ್ಞತೆ ಸಲ್ಲಿಸಿದರು. ಭೋಪಾಲ್‌ನಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿದಾಯ ಭಾಷಣ ಮಾಡಿದ ಚೌಹಾಣ್, ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿರುವ ಸಮಯದಲ್ಲಿ ನಾನು ಪದತ್ಯಾಗ ಮಾಡುತ್ತಿದ್ದೇನೆ ಎಂಬುದೇ ನನಗಿರುವ ತೃಪ್ತಿ ಎಂದರು.

ಬಿಜೆಪಿಯು ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರವನ್ನು ಪುನಃ ಸ್ಥಾಪಿಸಿದೆ. ಚುನಾವಣಾ ಫಲಿತಾಂಶಕ್ಕೂ ಮೊದಲು ಬಿಜೆಪಿ ಸೋಲುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಶ್ರಮವಹಿಸಿ ರಾಜ್ಯಾದ್ಯಂತ ಸುತ್ತಾಡಿದೆ. ಅದರ ಪ್ರತಿಫಲ ಇಂದು ಪಕ್ಷ ಅಧಿಕಾರದಲ್ಲಿದೆ. ಇದು ನನಗೆ ಸಂತಸ ತಂದಿದೆ ಎಂದರು.

4 ಬಾರಿಯ ಸಿಎಂ ಹೆಗ್ಗಳಿಕೆ: ಶಿವರಾಜ್​ ಸಿಂಗ್​ ಚೌಹಾಣ್​ ಅವರು ಬಿಜೆಪಿಯ ಸ್ಟಾರ್​ ನಾಯಕ. 1990 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಬಳಿಕ 1991 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸಂಸದ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದರು. ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು 2005 ರಲ್ಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅಂದಿನಿಂದ ಹಿಂತಿರುಗಿ ನೋಡದ ಚೌಹಾಣ್​ ಸತತ ನಾಲ್ಕು ಬಾರಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದರು. 2018 ರ ಚುನಾವಣೆಯಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿ, ಕಮಲನಾಥ್​ ನೇತೃತ್ವದಲ್ಲಿ ಸರ್ಕಾರ ರಚಿಸಿತು.

2020 ರಲ್ಲಿ ಪಕ್ಷದಲ್ಲಿ ಬಂಡಾಯ ಶುರುವಾಗಿ 15 ತಿಂಗಳೊಳಗೆ ಸರ್ಕಾರ ಪತನವಾಯಿತು. ಆಗಿನ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ನಿಷ್ಠಾವಂತ ಶಾಸಕರೊಂದಿಗೆ ಬಿಜೆಪಿಗೆ ಪಕ್ಷಾಂತರವಾದರು. ಇದರಿಂದ ಕೇಸರಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದಿತು. ಚೌಹಾಣ್ ನಾಯಕತ್ವದಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತಿದ್ದರೂ, ನಾಲ್ಕನೇ ಅವಧಿಗೆ ಅವರನ್ನೇ ಮುಖ್ಯಮಂತ್ರಿಯಾಗಿ ಮಾಡಲಾಯಿತು. ಇದರೊಂದಿಗೆ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತದೆ. ವಿರೋಧಿ ಅಲೆ ಇದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ, ರಾಜ್ಯಾದ್ಯಂತ ಮಿಂಚಿನ ಸಂಚಾರ ನಡೆಸಿದ ಚೌಹಾಣ್​, ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿ ಜನರನ್ನು ತಲುಪಿದರು. ಚುನಾವಣೆಯಲ್ಲಿ ಹಿಂದಿಗಿಂತಲೂ ಅತ್ಯಧಿಕ ಸ್ಥಾನಗಳಲ್ಲಿ ಪಕ್ಷ ಜಯಭೇರಿ ಬಾರಿಸಿತು. 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಪಡೆಯಿತು. 114 ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್​ ಧೂಳಿಪಟವಾಗಿ 66 ಸ್ಥಾನಗಳಿಗೆ ಕುಸಿಯಿತು.

ಡಿಸೆಂಬರ್​ 11 ರಂದು ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಜೊತೆಗೆ ಇಬ್ಬರು ಹಿರಿಯ ಬಿಜೆಪಿ ನಾಯಕರಾದ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವ್ರಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಲಾಯಿತು.

ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಆಗಿ ಮೋಹನ್​ ಯಾದವ್​ ಅಚ್ಚರಿ ಆಯ್ಕೆ: ಇಬ್ಬರಿಗೆ ಡಿಸಿಎಂ ಸ್ಥಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.