ETV Bharat / bharat

ಬಂಗಾಳ: ಟಿಎಂಸಿ ನಾಯಕನ ಮನೆಯಲ್ಲಿ ವೋಟಿಂಗ್ ಮಷಿನ್‌- ವಿವಿಪ್ಯಾಟ್ ಪತ್ತೆ! - west bengal election update

ಉಲುಬೇರಿಯಾ ಉತ್ತರ ವಿಧಾನಸಭಾ ಕ್ಷೇತ್ರದ ಟಿಎಂಸಿ ನಾಯಕನ ಮನೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್‌ ಮೆಷಿನ್‌ (ಇವಿಎಂ) ಮತ್ತು ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್ (ವಿವಿಪ್ಯಾಟ್​) ಯಂತ್ರಗಳು ಪತ್ತೆಯಾಗಿವೆ.

EVM
ಇವಿಎಂ- ವಿವಿಪ್ಯಾಟ್
author img

By

Published : Apr 6, 2021, 9:36 AM IST

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ, ಉಲುಬೇರಿಯಾ ಉತ್ತರ ವಿಧಾನಸಭಾ ಕ್ಷೇತ್ರದ ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್​ ಯಂತ್ರಗಳು ಪತ್ತೆಯಾಗಿವೆ.

ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ!

ಟಿಎಂಸಿ ನಾಯಕ ಗೌತಮ್ ಘೋಷ್ ತಮ್ಮ ಮನೆಯಲ್ಲಿ ಯಂತ್ರಗಳನ್ನು ಅಡಗಿಸಿಟ್ಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಚಿರನ್ ಬೇರಾ ಆರೋಪಿಸಿದ್ದರು. ಈ ಬಳಿಕ ಸ್ಥಳೀಯರು ಖಚಿತ ಮಾಹಿತಿ ಪಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಆದರೆ ಸ್ಥಳದಲ್ಲಿದ್ದ ಕಾರ್ಯಕರ್ತರ ನಡುವೆ ಗಲಭೆ ಏರ್ಪಡುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್​ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.