ETV Bharat / bharat

ಸುದೀರ್ಘ ವಿಚಾರಣೆಯ ಬಳಿಕ ಚಂದ್ರಬಾಬು ನಾಯ್ಡುರನ್ನು ACB ಕೋರ್ಟ್‌ಗೆ ಹಾಜರುಪಡಿಸಿದ ಆಂಧ್ರ ಪೊಲೀಸರು

ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ​ ಹಗರಣ ಆರೋಪದಡಿ ಬಂಧನಕ್ಕೊಳಗಾಗಿರುವ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು, ಆರೋಗ್ಯ ತಪಾಸಣೆಯ ಬಳಿಕ ಎಸಿಬಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಚಂದ್ರಬಾಬು ನಾಯ್ಡು ಬಂಧನ ಪ್ರಕರಣ
ಚಂದ್ರಬಾಬು ನಾಯ್ಡು ಬಂಧನ ಪ್ರಕರಣ
author img

By ETV Bharat Karnataka Team

Published : Sep 10, 2023, 8:11 AM IST

Updated : Sep 10, 2023, 8:21 AM IST

ವಿಜಯವಾಡ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಆಂಧ್ರ ಪೊಲೀಸರು ಇಂದು ವಿಜಯವಾಡದ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕೌಶಲ್ಯಾಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ದುರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ನಂದ್ಯಾಲದಲ್ಲಿ ಬಂಧಿಸಿತ್ತು. ಬಳಿಕ ಕುಂಚನಪಲ್ಲಿಯಲ್ಲಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಕಚೇರಿಯಲ್ಲಿ 10 ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಇಂದು ನಸುಕಿನ ಜಾವ 3:40ಕ್ಕೆ ವೈದ್ಯಕೀಯ ಪರೀಕ್ಷೆಗೆ ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸುಮಾರು 50 ನಿಮಿಷಗಳ ಕಾಲ ನಡೆದ ವೈದ್ಯಕೀಯ ಪರೀಕ್ಷೆಗಳ ನಂತರ ಭ್ರಷ್ಟಾಚಾರ ನಿಗ್ರಹ ದಳದ ನ್ಯಾಯಾಲಯಕ್ಕೆ ಬಿಗಿ ಭದ್ರತೆಯ ನಡುವೆ ಹಾಜರುಪಡಿಸಲಾಯಿತು.

  • #WATCH | TDP chief and former Andhra Pradesh CM N Chandrababu Naidu produced at ACB court in Vijayawada.

    CM N Chandrababu Naidu was arrested by the CID in connection with the Skill Development cooperation scam, yesterday. pic.twitter.com/QDn8wuVebJ

    — ANI (@ANI) September 10, 2023 " class="align-text-top noRightClick twitterSection" data=" ">

ಸುಪ್ರೀಂ ಕೋರ್ಟ್ ವಕೀಲ ಸಿದ್ದಾರ್ಥ್ ಲೂಥ್ರಾ ಮತ್ತು ತಂಡ ನಾಯ್ಡು ಅವರನ್ನು ಕೋರ್ಟ್‌ನಲ್ಲಿ ಪ್ರತಿನಿಧಿಸುತ್ತಿದೆ. ಟಿಡಿಪಿಯ ಹಲವಾರು ಹಿರಿಯ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ನ್ಯಾಯಾಲಯದ ಸಂಕೀರ್ಣದಲ್ಲಿ ಸೇರಿದ್ದರು. ಪುತ್ರ ನಾರಾ ಲೋಕೇಶ್, ಪತ್ನಿ ನಾರಾ ಭುವನೇಶ್ವರಿ ಕಂಡುಬಂದರು.

ಇದಕ್ಕೂ ಮುನ್ನ ಟಿಡಿಪಿ ಸಂಸದ ರವೀಂದ್ರ ಕುಮಾರ್ ಅವರು ಶನಿವಾರ (ನಿನ್ನೆ) ರಾಜ್ಯ ಸರ್ಕಾರ ಮತ್ತು ಸಿಐಡಿ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ನಾಯ್ಡುರನ್ನು ಬಂಧಿಸಿ 20 ಗಂಟೆಗಳ ನಂತರವೂ ನ್ಯಾಯಾಲಯದ ಮುಂದೆ ಹಾಜರುಪಡಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಬಂಧನ ಕ್ರಮ ಅಕ್ರಮ, ರಾಜಕೀಯ ದ್ವೇಷದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿದರು.

ಪ್ರಕರಣವೇನು?: 2015ರಲ್ಲಿ ಆಂಧ್ರಪ್ರದೇಶ ಸರ್ಕಾರ ಯುವಕರಿಗೆ ಕೌಶಲ್ಯ ತರಬೇತಿ ನೀಡುವ 3,350 ಕೋಟಿ ರೂಪಾಯಿ ವೆಚ್ಚದ ಯೋಜನೆಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಜರ್ಮನ್ ಕಂಪನಿಯ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಈ ಯೋಜನೆಯಲ್ಲಿ 240 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. (ಪಿಟಿಐ)

ಇದನ್ನೂ ಓದಿ: Chandrababu Naidu: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜೊತೆ ಮಾಜಿ ಸಚಿವನ ಬಂಧನ

Last Updated : Sep 10, 2023, 8:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.