ETV Bharat / bharat

ಬಂಗಾಳ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಜಿ ಆರೋಗ್ಯ ಸ್ಥಿರ - west Bengal latest News

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

ಬುದ್ಧದೇಬ್ ಭಟ್ಟಾಚಾರ್ಜಿ
ಬುದ್ಧದೇಬ್ ಭಟ್ಟಾಚಾರ್ಜಿ
author img

By

Published : Dec 10, 2020, 3:50 PM IST

ಪಶ್ಚಿಮ ಬಂಗಾಳ: ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.9ರಂದು ಮಧ್ಯರಾತ್ರಿ 2.20ರ ಸುಮಾರಿಗೆ ವುಡ್​ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿದ್ದು, ಕ್ರಿಟಿಕಲ್ ಕೇರ್ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬುದ್ಧದೇಬ್ ಕುಟುಂಬಸ್ಥರನ್ನು ವೈದ್ಯರು ಭೇಟಿ ಮಾಡಿ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಸದ್ಯ ಅವರ ನಾಡಿಮಿಡಿತ, ರಕ್ತದೊತ್ತಡ ಎಲ್ಲವೂ ಸ್ಥಿರವಾಗಿದ್ದು, ಮೆಕ್ಯಾನಿಕಲ್​ ವೆಂಟಿಲೇಶನ್​ ಹಿಂತೆಗೆದುಕೊಳ್ಳುವ ಯೋಚನೆ ಮಾಡಲಾಗಿದೆ. ಹೃದಯದ ಮಿಡಿವೂ ಸ್ಥಿರವಾಗಿದೆ. ಉತ್ತಮ ಚಿಕಿತ್ಸೆ ನೀಡಿ ನೋಡಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬ ವೈದ್ಯರೂ ಸಹ ಜಾಗರೂಕತೆಯಿಂದ ಚಿಕಿತ್ಸೆ ನೀಡುತ್ತಿದ್ದಾರೆ. ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬುದ್ಧದೇಬ್ ಭಟ್ಟಾಚಾರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.