ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ, ಹೀಗಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಮುಂದುವರೆಯಲಿದೆ. ಆಸ್ಪತ್ರೆಯಲ್ಲಿ ಅಳವಡಿಸಿದ್ದ ರೈಲ್ಸ್ ಟ್ಯೂಬ್, ಕ್ಯಾತಿಟರ್ ಸೇರಿದಂತೆ ಇತರ ವೈದ್ಯಕೀಯ ಉಪಕರಣಗಳನ್ನು ತೆಗೆಯಲಾಗಿದೆ ಎಂದು ಆಸ್ಪತ್ರೆಯ ವಕ್ತಾರರರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : 'ಲಡಾಖ್ನಲ್ಲಿ ಯೋಧರದ್ದು ಅಪ್ರತಿಮ ಶೌರ್ಯ' ಎಂದ ರಾಜನಾಥ್ ಸಿಂಗ್
ಉಸಿರಾಟದ ತೊಂದರೆ ಉಲ್ಬಣಗೊಂಡ ಹಿನ್ನೆಲೆ ಭಟ್ಟಾಚಾರ್ಜಿ ಅವರನ್ನು ಡಿಸೆಂಬರ್ 9 ರಂದು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೇ.70 ರಷ್ಟು ಉಸಿರಾಟದ ಸಮಸ್ಯೆ ಇದ್ದರೂ, ಅವರ ಕೋವಿಡ್ ವರದಿ ನೆಗೆಟಿವ್ ಬಂದಿತ್ತು.