ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ.. ಮಾಜಿ ಶಾಸಕನಿಗೆ 25 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್

ಆಗಸ್ಟ್ 13ರಂದು ಮಾಜಿ ಶಾಸಕ ಡೋರ್ಫಾಂಗ್ ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಕಾಮುಕನನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದೇ ಪ್ರಕರಣದಲ್ಲಿ ಕೋರ್ಟ್, ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ..

Julius Dorphang
Julius Dorphang
author img

By

Published : Aug 25, 2021, 8:50 PM IST

ಶಿಲ್ಲಾಂಗ್ (ಮೇಘಾಲಯ) : 2017ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್‌ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ವಿಶೇಷ ನ್ಯಾಯಾಲಯ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಥವಾ ಪೋಕ್ಸೊ)ದ ನ್ಯಾಯಾಧೀಶ ಫೆಬ್ರೊನಿಯಸ್ ಸಿಲ್ಕಾಮ್ ಸಂಗ್ಮಾ, ಅಪರಾಧಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ 15 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 13ರಂದು ಮಾಜಿ ಶಾಸಕ ಡೋರ್ಫಾಂಗ್ ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಕಾಮುಕನನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದೇ ಪ್ರಕರಣದಲ್ಲಿ ಕೋರ್ಟ್, ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮುಂದಿನ ವಾರ ಮೇಘಾಲಯ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಡೋರ್ಫಾಂಗ್ ಪರ ವಕೀಲ ಕಿಶೋರ್ ಚಿ ಗೌತಮ್ ಅವರು ಹೇಳಿದ್ದಾರೆ.

2017ರಲ್ಲಿ ಜೂಲಿಯಸ್ ಮಾವತಿ ಶಾಸಕರಾಗಿದ್ದ ವೇಳೆ 14 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದು, ಅವರನ್ನ ಗುವಾಹಟಿಯಲ್ಲಿ ಪತ್ತೆ ಮಾಡಿ ಬಂಧಿಸಲಾಗಿತ್ತು. ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಮಾಜಿ ಶಾಸಕನನ್ನು ಬಂಧಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.