ಬಂಕುರಾ (ಪಶ್ಚಿಮಬಂಗಾಳ): ಈ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಅವರನ್ನು ಅಕ್ರಮ ಹಣಕಾಸು ವ್ಯವಹಾರದ ಆರೋಪದ ಮೇಲೆ ಬಂಧಿಸಲಾಗಿದೆ.
ಬಿಷ್ಣುಪುರದ ಮಾಜಿ ಶಾಸಕರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು 2020ರಲ್ಲಿ ಸ್ಥಳೀಯ ಸಂಸ್ಥೆಯೊಂದರಲ್ಲಿ ಅಧ್ಯಕ್ಷರಾಗಿದ್ದಾಗ ಇ-ಟೆಂಡರ್ ಮತ್ತು ಇತರ ವ್ಯವಹಾರಗಳಲ್ಲಿ ಬರೋಬ್ಬರಿ 9.91 ಕೋಟಿ ರೂ. ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಯುವತಿ ಜೊತೆಗಿನ ನಗ್ನ ವಿಡಿಯೋ ಇದೆ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್ ಮೇಲ್!
ವಿಚಾರಣೆ ವೇಳೆ ಪೊಲೀಸರು ಕೇಳಿದ ಪ್ರಶ್ನೆಗಳಿಗೂ ಸರಿಯಾದ ಉತ್ತರ ನೀಡಲು ಶ್ಯಾಮ್ ಪ್ರಸಾದ್ ಮುಖರ್ಜಿ ವಿಫಲವಾದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಬಂಕುರಾ ಪೊಲೀಸ್ ವರಿಷ್ಠಾಧಿಕಾರಿ ಧೃತಿಮಾನ್ ಸರ್ಕಾರ್ ತಿಳಿಸಿದ್ದಾರೆ.