ETV Bharat / bharat

ಜನರೆದುರೇ ಗುಂಡು ಹಾರಿಸಿಕೊಂಡು ಮಾಜಿ ಸಚಿವ ಆತ್ಮಹತ್ಯೆ.. ಕಾರಣ?

ಗುಂಡು ಹಾರಿಸಿಕೊಂಡ ರಾಜೇಂದ್ರ ಬಹುಗುಣ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಆರೋಪಗಳಿಂದ ಅವರು ಅಸಮಾಧಾನಗೊಂಡಿದ್ದರು ಅನ್ನೋದು ಮೇಲ್ನೋಟಕ್ಕೆ ತಿಳಿದುಬಂದಿದೆ.

Ex-Uttarakhand Minister kills self after being booked for molesting granddaughter

author img

By

Published : May 28, 2022, 7:24 AM IST

ಡೆಹ್ರಾಡೂನ್ (ಉತ್ತರಾಖಂಡ): ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ತೊಟ್ಟಿಯ ಮೇಲೆ ನಿಂತುಕೊಂಡು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ಸೊಸೆ ಆರೋಪಿಸಿದ ಕೆಲವೇ ದಿನಗಳಲ್ಲಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಕರೆ ಮಾಡಿದ್ದ ಬಹುಗುಣ, ನನ್ನ ಸೊಸೆಯ ಆರೋಪ ನನಗೆ ಬೇಸರ ತಂದಿದೆ. ಹಾಗಾಗಿ ತಾವು ಆತ್ಮಹತ್ಯೆಗೆ ಯೋಚಿಸಿರುವುದಾಗಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಪೊಲೀಸರು ಅವರ ಮನೆಯತ್ತ ಧಾವಿಸಿದ್ದರು. ಆದರೆ, ಪೊಲೀಸರು ಬಂದ ಬಳಿಕ, ಅಕ್ಕಪಕ್ಕದ ಮನೆಯವರು ಹಾಗೂ ಇತರರ ಕಣ್ಣೆದುರೇ ಅವರು ತಮಗೆ ತಾವು ಗುಂಡು ಹಾರಿಸಿಕೊಂಡಿದ್ದಾರೆ. ಈ ಭಯಾನಕ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಅವರ ಸೊಸೆಯ ದೂರಿನ ಮೇರೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ರಾಜೇಂದ್ರ ಬಹುಗುಣ ವಿರುದ್ಧ ದೂರು ದಾಖಲಾಗಿತ್ತು. ಇದಲ್ಲದೇ ನೆರೆಮನೆಯ ಸವಿತಾ ಎಂಬುವರಿಂದಲೂ ಮೃತ ವ್ಯಕ್ತಿಯ ವಿರುದ್ಧ ಮತ್ತೊಂದು ಪ್ರಕರಣ ಕೂಡ ದಾಖಲಾಗಿತ್ತು. ತನ್ನ ಅತ್ತೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ನಿಂದನೆ, ಬೆದರಿಕೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಬಹುಗುಣ ಅವರ ವಿರುದ್ಧ ದೌರ್ಜನ್ಯದ ಆರೋಪ ಮಾಡಿದ್ದ ಸೊಸೆ ಮತ್ತು ಆಕೆಯ ತಂದೆ ಹಾಗೂ ಪಕ್ಕದ ಮನೆಯ ಒಬ್ಬರ ಮೇಲೆ ಪ್ರತಿದೂರು ದಾಖಲಾಗಿದೆ. ಬಹುಗುಣ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುಂಡು ಹಾರಿಸಿಕೊಂಡ ರಾಜೇಂದ್ರ ಬಹುಗುಣ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಆರೋಪಗಳಿಂದ ಅವರು ಅಸಮಾಧಾನಗೊಂಡಿದ್ದರು ಅನ್ನೋದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಹಲ್ದ್ವಾನಿ ಸರ್ಕಲ್ ಆಫೀಸರ್ ಭೂಪಿಂದರ್ ಸಿಂಗ್ ಧೋನಿ ಮಾಹಿತಿ ನೀಡಿದ್ದಾರೆ.

ಉತ್ತರಾಖಂಡ್ ರೋಡ್‌ವೇಸ್ ಉದ್ಯೋಗಿಯಾಗಿರುವ ಬಹುಗುಣ ಅವರಿಗೆ ರಾಜ್ಯದ ಮೊದಲ ಚುನಾಯಿತ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನವನ್ನು ನೀಡಲಾಗಿತ್ತು. ಕಾಂಗ್ರೆಸ್‌ ನಾಯಕರಾಗಿದ್ದ ಬಹುಗುಣ ಅವರು 2004-05ರಲ್ಲಿ ಎನ್‌ಡಿ ತಿವಾರಿ ಸರ್ಕಾರದಲ್ಲಿ ಸಚಿವರಾಗಿದ್ದರು.

ಇದನ್ನೂ ಓದಿ: ಜೇನು ಕುಟುಕುನಿಂದ ಭಾರಿ ಆದಾಯಗಳಿಸಿದ ಯುವಕ: ಗ್ರಾಂಗಳಷ್ಟು ತೂಕಕ್ಕೆ ಲಕ್ಷ ಲಕ್ಷ ರೂ... ಎಲ್ಲಿ ಅಂತೀರಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.