ETV Bharat / bharat

ದೆಹಲಿ ಅಬಕಾರಿ ನೀತಿ ಕೇಸ್: ವಿಚಾರಣೆ ಮುಂದೂಡುವಂತೆ ಸಿಬಿಐಗೆ ಸಿಸೋಡಿಯಾ ಮನವಿ - ದೆಹಲಿ ಅಬಕಾರಿ ನೀತಿ ಪ್ರಕರಣ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಮನೀಷ್ ಸಿಸೋಡಿಯಾ ಕೇಳಿಕೊಂಡಿದ್ದಾರೆ. ತಾವು ಬಜೆಟ್ ತಯಾರಿಕೆಯಲ್ಲಿ ತೊಡಗಿಕೊಂಡಿರುವುದರಿಂದ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

Excise case Sisodia urges CBI to defer questioning

author img

By

Published : Feb 19, 2023, 1:28 PM IST

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಭಾನುವಾರ ಮನವಿ ಮಾಡಿದ್ದಾರೆ. ತಾವು ದೆಹಲಿಯ ಬಜೆಟ್‌ ಸಿದ್ಧತೆಯಲ್ಲಿ ತೊಡಗಿರುವುದರಿಂದ ವಿಚಾರಣೆಯನ್ನು ಮುಂದೂಡುವಂತೆ ಅವರು ಕೋರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಸೋಡಿಯಾ ಅವರನ್ನು ಭಾನುವಾರ ವಿಚಾರಣೆಗೆ ಕರೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಇನ್ನಿತರ ಆರೋಪಿಗಳ ವಿರುದ್ಧ ತನಿಖೆ ಇನ್ನು ನಡೆಯುತ್ತಿರುವುದರಿಂದ ಇವರನ್ನು ಚಾರ್ಜ್ ಶೀಟ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ.

ದೆಹಲಿಯ ಬಜೆಟ್​ ಅನ್ನು ಅಂತಿಮಗೊಳಿಸುವಲ್ಲಿ ನಾನು ನಿರತನಾಗಿದ್ದೇನೆ ಮತ್ತು ಇದು ಬಹಳ ಮಹತ್ವದ ಸಮಯವಾಗಿದೆ. ಹೀಗಾಗಿ ನಾನು ಫೆಬ್ರವರಿ ಕೊನೆಯ ವಾರದ ನಂತರ ವಿಚಾರಣೆಗೆ ಹಾಜರಾಗುವುದಾಗಿ ಸಿಬಿಐಗೆ ಪತ್ರ ಬರೆದಿದ್ದೇನೆ ಎಂದು ಸಿಸೋಡಿಯಾ ಹೇಳಿದ್ದಾರೆ. ಸಮಯಕ್ಕೆ ಸರಿಯಾಗಿ ಬಜೆಟ್ ಮಂಡಿಸುವುದು ಹಣಕಾಸು ಸಚಿವನಾಗಿ ನನ್ನ ಕರ್ತವ್ಯವಾಗಿದೆ ಮತ್ತು ಅದಕ್ಕಾಗಿ 24 ಗಂಟೆಯೂ ಶ್ರಮಿಸುತ್ತಿದ್ದೇನೆ. ಫೆಬ್ರವರಿ ಕೊನೆಯ ವಾರದ ನಂತರ ಬಂದು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಅವಕಾಶ ನೀಡುವಂತೆ ಸಿಬಿಐಗೆ ಮನವಿ ಮಾಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿರುವ ಸಿಸೋಡಿಯಾ ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಈ ಹಿಂದೆ ಅಕ್ಟೋಬರ್ 17 ರಂದು ವಿಚಾರಣೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನು ಸಹ ಶೋಧಿಸಲಾಗಿತ್ತು.

ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿಯಲ್ಲಿ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಇನ್ನು ಮುಂದೆ ಮದ್ಯ ಮಾರಾಟದಲ್ಲಿ ಸರ್ಕಾರವು ಭಾಗಿಯಾಗುವುದಿಲ್ಲ ಮತ್ತು ಮದ್ಯದ ಮೇಲಿನ ಬೆಲೆಗಳು, ರಿಯಾಯಿತಿಗಳು ಮತ್ತು ಇತರ ಕೊಡುಗೆಗಳನ್ನು ಖಾಸಗಿ ಮದ್ಯದ ಅಂಗಡಿಗಳೇ ನಿಯಂತ್ರಿಸಬಹುದು ಎಂದು ಈ ನೀತಿಯಲ್ಲಿ ಹೇಳಲಾಗಿತ್ತು. ಹೊಸ ಅಬಕಾರಿ ನೀತಿಯ ಪ್ರಕಾರ ಮನೆಗಳಿಗೆ ನೇರವಾಗಿ ಸಾರಾಯಿ ತಲುಪಿಸುವ ಅವಕಾಶ (ಹೋಂ ಡೆಲಿವರಿ) ನೀಡಲಾಗಿತ್ತು. ಬೆಳಗಿನ ಜಾವ 3 ಗಂಟೆಯವರೆಗೆ ಮದ್ಯದಂಗಡಿಗಳು ತೆರೆಯಲು ಅವಕಾಶ ಇದರಲ್ಲಿತ್ತು. ಮದ್ಯ ಮಾರಾಟಗಾರರಿಗೆ ಅಕ್ರಮವಾಗಿ ಲಾಭ ಮಾಡಿಕೊಡುವ ಉದ್ದೇಶದಿಂದ ಹೊಸ ಅಬಕಾರಿ ನೀತಿ ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಮನೀಷ್ ಸಿಸೋಡಿಯಾ ವಿರುದ್ಧ ಆರೋಪಿಸಲಾಗಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಆರೋಪಿ ಎಂದು ಹೆಸರಿಸದಿದ್ದರೂ, ಮಾಧ್ಯಮ ವರದಿಗಳ ಪ್ರಕಾರ ದೆಹಲಿಯ ಎಎಪಿ ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಿ ವಿಜಯ್ ನಾಯರ್ ಮತ್ತು ಅಭಿಷೇಕ್ ಅವರನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. ಹೊಸ ಅಬಕಾರಿ ನೀತಿಯ ವಿರುದ್ಧ ತನಿಖೆ ಆರಂಭವಾದ ನಂತರ ದೆಹಲಿಯಲ್ಲಿ ಹೊಸ ಅಬಕಾರಿ ನೀತಿಯನ್ನು ಹಿಂತೆಗೆದುಕೊಳ್ಳಲಾಯಿತು ಮತ್ತು ಖಾಸಗಿ ಮದ್ಯದ ಅಂಗಡಿಗಳ ಪರವಾನಗಿಯನ್ನು ತಡೆಹಿಡಿಯಲಾಯಿತು. ಈಗ ದೆಹಲಿಯಲ್ಲಿ ಸರ್ಕಾರಿ ಮಾರಾಟಗಾರರಿಗೆ ಮಾತ್ರ ಮದ್ಯ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕೇಜ್ರಿವಾಲ್‌ ಮನೆ ಮೇಲೆ ದಾಳಿ: 'ಇದು ಬಿಜೆಪಿ ಗೂಂಡಾಗಳ ಕೃತ್ಯ' ಎಂದ ಮನೀಶ್‌ ಸಿಸೋಡಿಯಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.