ನವದೆಹಲಿ: ಮಧ್ಯಪ್ರದೇಶದ 28 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಇದರ ಫಲಿತಾಂಶ ಬರುವ ನವೆಂಬರ್ 10ರಂದು ಪ್ರಕಟಗೊಳ್ಳಲಿದೆ. ಈ ಮಧ್ಯೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಬಹಿರಂಗಗೊಂಡಿದೆ.
ವಿವಿಧ ಸಮೀಕ್ಷೆಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ 16ರಿಂದ 18 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದ್ದು, ಕಾಂಗ್ರೆಸ್ 11ರಲ್ಲಿ ಜಯ ಸಾಧಿಸಲಿದೆ ಎಂದು ತಿಳಿದು ಬಂದಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಶೇ. 46ರಷ್ಟು ಮತ ಪಡೆದುಕೊಂಡಿದ್ದು, ಕಾಂಗ್ರೆಸ್ ಶೇ. 43ರಷ್ಟು ಮತ ಪಡೆದುಕೊಂಡಿದೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಇನ್ನು ಬಿಎಸ್ಪಿ 1 ಕ್ಷೇತ್ರದಲ್ಲಿ ಜಯ ದಾಖಲು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಹಾರ ಎಕ್ಸಿಟ್ ಪೋಲ್ ಫಲಿತಾಂಶ ಬಹಿರಂಗ: ಸಮೀಕ್ಷೆಗಳ ಪ್ರಕಾರ ಈ ಮೈತ್ರಿಗೆ ಗೆಲುವು!?
ಕಾಂಗ್ರೆಸ್ನ 25 ಶಾಸಕರು ದಿಢೀರ್ ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಂಡಿದ್ದರಿಂದ ಈ ಉಪ ಚುನಾವಣೆ ನಡೆದಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ 107 ಶಾಸಕರನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ ಪಡೆದುಕೊಳ್ಳಲು 9 ಸೀಟು ಅವಶ್ಯಕತೆ ಇದೆ. ಸದ್ಯ ಕಾಂಗ್ರೆಸ್ 87 ಶಾಸಕರನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ 116 ಆಗಿದೆ.
ಆಕ್ಸಿಸ್ ಇಂಡಿಯಾ ಟುಡೇ ಸಮೀಕ್ಷೆ
- ಬಿಜೆಪಿ-17
- ಕಾಂಗ್ರೆಸ್ 11