ಪೂರ್ವ ಗೋದಾವರಿ(ಆಂಧ್ರಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ಗೌರಿಪಟ್ಟಣಂನಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.
ವಿಷನ್ ಡ್ರಗ್ಸ್ ಕಾರ್ಖಾನೆಯ ಈಥೈಲ್ ಕಾಲಮ್ ಟ್ಯೂಬ್‌ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ, ದುರಸ್ತಿ ಮಾಡುವಾಗ ಸ್ಫೋಟ ಸಂಭವಿಸಿದೆ. ಇದರಿಂದ ತೀವ್ರ ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೂವರು ಮಾರ್ಗಮಧ್ಯೆಯೆ ಉಸಿರು ಚೆಲ್ಲಿದ್ದಾರೆ. ಇನ್ನೂ ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.