ಆಂಧ್ರಪ್ರದೇಶ : ಕೊರೊನಾ ನಿಯಂತ್ರಣ ದೃಷ್ಟಿಯಿಂದ ಜೂನ್ 20 ರವರೆಗೆ ಕೆಲವು ಸಡಿಲಿಕೆ ಜೊತೆಗೆ ಕರ್ಫ್ಯೂ ವಿಸ್ತರಿಸಿ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು. ಈ ತಿಂಗಳು ಇದನ್ನು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರಿ ಕಚೇರಿಗಳನ್ನು ಸಹ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಲಾಗುವುದು ಎಂದು ತಿಳಿಸಲಾಗಿದೆ.
ಆಂಧ್ರದಲ್ಲಿ ಮೊದಲ ಬಾರಿಗೆ ಜೂನ್ 5 ರಂದು ಕರ್ಫ್ಯೂ ಜಾರಿ ಮಾಡಲಾಗಿದ್ದು, ಜೂನ್ 10 ರಂದು ಮುಕ್ತಾಯಗೊಳ್ಳಲಿದೆ. ಕೊರೊನಾ ಪರಿಸ್ಥಿತಿ ಕುರಿತು ಸಿಎಂ ಜಗನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.