ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ನಾಳೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ದ್ವೀಪ ರಾಷ್ಟ್ರದೊಂದಿಗೆ ಭಾರತದ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಈ ಪ್ರವಾಸ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ತಿರಂಗಾ ಧ್ವಜ!
ಪ್ರವಾಸದ ವೇಳೆ ಅಲ್ಲಿನ ಪ್ರಧಾನಿ ಹಾಗೂ ರಾಷ್ಟ್ರಪತಿಗಳೊಂದಿಗೆ ಭಾರತೀಯ ಮೀನುಗಾರರ ಸಮಸ್ಯೆ ಸೇರಿದಂತೆ ಕೆಲ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವರು, ಜನವರಿ 7ರವರೆಗೆ ಅಲ್ಲಿ ಉಳಿದುಕೊಳ್ಳಲಿದ್ದಾರೆ.
ವಿದೇಶಾಂಗ ಸಚಿವರು ಹಮ್ಮಿಕೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಲಿದ್ದು, ಅಲ್ಲಿನ ವಿದೇಶಾಂಗ ಸಚಿವರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ.