ETV Bharat / bharat

ಪಿಎಂಒ ಉಪ ಕಾರ್ಯದರ್ಶಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ನಕಲಿ IAS ಅಧಿಕಾರಿ ಬಂಧನ - ದೆಹಲಿಯ ಪ್ರಧಾನಿ ಕಾರ್ಯಾಲಯದ ಉಪ ಕಾರ್ಯದರ್ಶಿ

ಕಾರ್ಯಕ್ರಮಮೊಂದರಲ್ಲಿ ಭಾಗವಹಿಸಿದ್ದ ಆರೋಪಿಯ ಚಲನವಲನದಿಂದ ಅನುಮಾನ ಬಂದು ಕಾರ್ಯಕ್ರಮ ಆಯೋಜಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Fake IAS officer posing as secretary of PMO arrested by Pune police
ಪಿಎಂಒ ಉಪ ಕಾರ್ಯದರ್ಶಿ ಎಂದು ನಂಬಿಸಿದ ನಕಲಿ IAS ಅಧಿಕಾರಿ ಬಂಧನ
author img

By

Published : May 31, 2023, 8:12 PM IST

ಪುಣೆ: ತಾನೊಬ್ಬ ಐಎಎಸ್​ ಅಧಿಕಾರಿ ಹಾಗೂ ದೆಹಲಿಯ ಪ್ರಧಾನಿ ಕಾರ್ಯಾಲಯದ ಉಪ ಕಾರ್ಯದರ್ಶಿ ಎಂದು ಹೇಳಿಕೊಂಡು ಪುಣೆಯಲ್ಲಿ ಸುತ್ತಾಡುತ್ತಿದ್ದ ನಕಲಿ ಐಎಸ್ ಅಧಿಕಾರಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪುಣೆಯ ಬನೇರ್​ನಲ್ಲಿ ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಕಲಿ ಐಎಎಸ್ ಅಧಿಕಾರಿಯನ್ನು ಘಟಕ 1ರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ವಾಸುದೇವ್ ನಿವೃತ್ತಿ ತಾಯ್ಡೆ (54) ಎಂದು ಗುರುತಿಸಲಾಗಿದ್ದು, ಆರೋಪಿಯ ವಿರುದ್ಧ ಚತುರಶೃಂಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯು ಫ್ಲಾಟ್ ನಂ 336, ರಣವರ್ ರೋಹೌಸ್ ತಾಲೇಗಾಂವ್ ದಭಾಡೆ ನಿವಾಸಿ ಎಂದು ತಿಳಿದು ಬಂದಿದೆ.

ಆರೋಪಿ ಡಾ. ಡಾ ವಿನಯ್ ಡಿಯೋ ಅವರು ತನ್ನನ್ನು ದೆಹಲಿಯ ಪ್ರಧಾನಿ ಕಾರ್ಯಾಲಯದ ಕಾರ್ಯದರ್ಶಿಯಾಗಿ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮತ್ತು "ಗುಪ್ತಚರಕ್ಕೆ ಸಂಬಂಧಿಸಿದ ಕೆಲಸ" ದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳೊಂದಿಗೆ ಹೇಳಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದ ಪುಣೆಯ ಬನೇರ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಮ್ಮು ಮತ್ತು ಕಾಶ್ಮೀರಕ್ಕೆ ನಿಧಿ ಸಂಗ್ರಹಿಸುವ ಸಲುವಾಗಿ ಪುಣೆಯ ಔಂಧ್ ಪ್ರದೇಶದಲ್ಲಿ 'ಬಾರ್ಡರ್ ಲೆಸ್ ವರ್ಲ್ಡ್ ಫೌಂಡೇಶನ್' ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂದು ತಿಳಿದು ಬಂದಿದೆ.

ಈ ಕಾರ್ಯಕ್ರಮದಲ್ಲಿ ಆರೋಪಿ ತಾನು ಪಿಎಂಒ ಕಚೇರಿಯಲ್ಲಿ ಕೆಲಸ ಮಾಡುವ ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಆದಾಗ್ಯೂ, ವೀರೇನ್ ಶಾ, ಸುಹಾಸ್ ಕದಂ, ಪಿಕೆ ಗುಪ್ತಾ ಸೇರಿದಂತೆ ಸಂಘಟಕರು ಮತ್ತು ಇತರ ಟ್ರಸ್ಟಿಗಳು ಮತ್ತು ಸದಸ್ಯರು ಈತನ ವರ್ತನೆಯಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಚತುರಶೃಂಗಿ ಪೊಲೀಸ್ ಠಾಣೆಯ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.

ನಂತರ ನಡೆದ ಪೊಲೀಸ್ ವಿಚಾರಣೆ ವೇಳೆ ಆರೋಪಿ, ಜನರನ್ನು ವಂಚಿಸಲು ಐಎಎಸ್ ಅಧಿಕಾರಿ ಎಂದು ಹೇಳಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಚತುರಶೃಂಗಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 419 ಹಾಗೂ 170 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಒಬ್ಬ ಪಿಎಂಒ ಅಧಿಕಾರಿ ಎಂದು ಹೇಳಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡಿದ್ದ ಗುಜರಾತ್​ನ ಕಿರಣ್​ ಪಟೇಲ್​ ಎಂಬಾತನನ್ನು ಜಮ್ಮು ಕಾಶ್ಮೀರದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಸರ್ಕಾರಿ ಸೌಲಭ್ಯವನ್ನು ಪಡೆದವನ ಮೇಲೆ ಮಾತ್ರವಲ್ಲದೇ, ಆತನಿಗೆ ಅನುಚಿತ ಪ್ರೊಟೋಕಾಲ್​ಗೆ ಅನುಕೂಲ ಮಾಡಿಕೊಟ್ಟಿದ್ದ ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಅಧಿಕಾರಿಗಳ ಮೇಲೂ ಉನ್ನತ ಪೊಲೀಸ್​ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು.

ಕಾಶ್ಮೀರಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದ ವಂಚಕ ಕಿರಣ್​ ಎಂಬಾತ ಹೋಟೆಲ್​ ಆತಿಥ್ಯ ಪಡೆದುಕೊಂಡಿದ್ದು ಮಾತ್ರವಲ್ಲದೆ ವಿಶೇಷ ಭದ್ರತೆ ಹಾಗೂ ಬುಲೆಟ್​ ಪ್ರೂಫ್​ ವಾಹನವನ್ನೂ ಪಡೆದು ಕಾಶ್ಮೀರದಲ್ಲಿ ಸುತ್ತಾಡಿದ್ದನು.

ಇದನ್ನೂ ಓದಿ: ಪಿಎಂಒ ಅಧಿಕಾರಿ ಎಂದು ಹೇಳಿ ವಂಚನೆ ಪ್ರಕರಣ: ಪ್ರೋಟೋಕಾಲ್​ಗೆ ಅನುಕೂಲ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.