ETV Bharat / bharat

ನಕಲಿ ಇನ್‌ಸ್ಟಾಗ್ರಾಮ್‌ ಖಾತೆ ತೆರೆದು ಕಿರುಕುಳ: ಆತ್ಮಹತ್ಯೆಗೆ ಶರಣಾದ ಬಾಲಕಿ

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ನಕಲಿ ಬಹು ಖಾತೆಗಳನ್ನು ನೋಡಿ ಬಾಲಕಿ ಭಯಗೊಂಡು ಕ್ರಿಮಿನಾಶಕ ಸೇವಿಸಿ ಜೀವನ ಅಂತ್ಯಗೊಳಿಸಿಕೊಂಡಿದ್ದಾರೆ.

Fake Instagram accounts force Telangana minor girl to end life

author img

By

Published : Jun 3, 2022, 10:45 PM IST

ಅದಿಲಾಬಾದ್ (ತೆಲಂಗಾಣ) : ಇನ್‌ಸ್ಟಾಗ್ರಾಮ್‌ನಲ್ಲಿ ಅಪರಿಚಿತರಿಂದ ಕಿರುಕುಳಕ್ಕೆ ಒಳಗಾಗಿದ್ದ ಹತ್ತನೇ ತರಗತಿ ಓದುತ್ತಿರುವ ಬಾಲಕಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚೋಡ ಮಂಡಲದ ನರಸಾಪುರ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಈ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರು ನರಸಾಪುರ ಗ್ರಾಮದ ನಿವಾಸಿ ಎಂದು ಎಚೋಡ ಪೊಲೀಸರು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ನಕಲಿ ಬಹು ಖಾತೆಗಳನ್ನು ನೋಡಿ ಬಾಲಕಿ ಭಯ ಭೀತಳಾಗಿದ್ದಾಳೆ.ಯಾರೋ ಆಕೆಯ ಹೆಸರಿನಲ್ಲಿ ಖಾತೆಯನ್ನು ರಚಿಸಿದ್ದಾರೆ ಮತ್ತು ಅದರಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದು, ಹುಡುಗಿಗೆ ತೊಂದರೆ ಉಂಟು ಮಾಡಿದ್ದಾರೆ. ಇದರಿಂದ ಮಾನಸಿಕವಾಗಿ ನೊಂದ ಬಾಲಕಿ ಕ್ರಿಮಿನಾಶಕ ಸೇವಿಸಿ ಜೀವನ ಅಂತ್ಯಗೊಳಿಸಿಕೊಂಡಿದ್ದಾಳೆ.

ಬಾಲಕಿ ಬರೆದಿದ್ದಾಳೆ ಎನ್ನಲಾದ ಡೆತ್​ನೋಟ್​ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ತನ್ನ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಾಲಕಿ ಮನವಿ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್​ ಸೋಂಕು ಸಂಖ್ಯೆ ಹೆಚ್ಚಳ: ಕರ್ನಾಟಕ ಸೇರಿ ಪಕ್ಕದ ಐದು ರಾಜ್ಯಗಳಿಗೂ ಕೇಂದ್ರದ ಪತ್ರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.