ETV Bharat / bharat

ಬಿಜೆಪಿಯ 'ನಕಲಿ ಸುದ್ದಿ ಕಾರ್ಖಾನೆ'ಗೆ ಮಾಧ್ಯಮ ಮಿತ್ರರು ಬಲಿ: ರಣದೀಪ್ ಸಿಂಗ್ ಸುರ್ಜೆವಾಲಾ ಗರಂ

ನಾಯಕತ್ವದ ವಿಚಾರದಲ್ಲಿ ಹೇಳಿಕೆ ನೀಡದಂತೆ ಎಲ್ಲ ಕಾಂಗ್ರೆಸ್ ನಾಯಕರಿಗೂ ಸೂಚಿಸಲಾಗಿದೆ. ಇಲ್ಲಿಂದ ಮುಂದಕ್ಕೆ ಹೋಗಿ ಮಾಡುವಂತಹ ಔಟ್ ಟರ್ನ್ ಟೀಕೆಗಳನ್ನು ಅಶಿಸ್ತು ಎಂದು ಪರಿಗಣಿಸಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿಕಾರಿದರು.

Randeep Singh Surjewala
ರಣದೀಪ್ ಸಿಂಗ್ ಸುರ್ಜೆವಾಲಾ
author img

By

Published : May 17, 2023, 9:24 PM IST

Updated : May 17, 2023, 9:45 PM IST

ನವದೆಹಲಿ: ''ಕರ್ನಾಟಕದಲ್ಲಿ ಮುಂದಿನ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಬಿಜೆಪಿಯ 'ನಕಲಿ ಸುದ್ದಿ ಕಾರ್ಖಾನೆ'ಗೆ ನಮ್ಮ ಆತ್ಮೀಯ ಮಾಧ್ಯಮ ಮಿತ್ರರು ಬಲಿಯಾಗಿದ್ದಾರೆ. ಬಿಜೆಪಿಯ ಹತಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಕರ್ನಾಟಕದ ಸಹೋದರ, ಸಹೋದರಿಯರ ನಿರ್ಧಾರದಿಂದ 40 ಪರ್ಸೆಂಟ್ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದರು'' ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಸುಳ್ಳು ಸುದ್ದಿ ಬಗ್ಗೆ ಎಚ್ಚರಿಕೆಯನ್ನೂ ನೀಡಿದರು.

  • A section of our dear friends of the media have fallen victim to the ‘fake news factory’ of BJP on formation of next Congress Government in Karnataka.

    We understand the frustration of BJP in being decisively rejected by the brother and sisters of Karnataka bringing an end to…

    — Randeep Singh Surjewala (@rssurjewala) May 17, 2023 Conclusion:" class="align-text-top noRightClick twitterSection" data=" Conclusion:"> Conclusion:

ಇದನ್ನೂ ಓದಿ: ಖರ್ಗೆ, ರಾಹುಲ್ ಬಳಿಕ ಸುರ್ಜೇವಾಲ ನಿವಾಸದಲ್ಲಿ ಡಿಕೆಶಿ ಸಭೆ: ವಿಡಿಯೋ

ರಣದೀಪ್ ಸಿಂಗ್ ಸುರ್ಜೆವಾಲಾ ಗರಂ: ಈ ಕುರಿತು ಟ್ವೀಟ್​ ಮಾಡಿದ ಅವರು, ''ಉತ್ತರ ಪ್ರದೇಶ, ಅಸ್ಸೋಂ , ಗೋವಾ ಮತ್ತು ಇತರ ಹಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ನಿರ್ಧರಿಸಲು 7ರಿಂದ 10 ದಿನಗಳನ್ನು ತೆಗೆದುಕೊಂಡಾಗ ಅದೇ ಜನರು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ಆಗ ಯಾರೂ ಹೈಕಮಾಂಡ್ ಸಂಸ್ಕೃತಿಯ ಬಗ್ಗೆ ಪಿಸುಗುಟ್ಟಲಿಲ್ಲ. ಆದರೆ, ಅದೇ ಶಕ್ತಿಗಳು ಮತ್ತು ಆಯ್ದ ಸುದ್ದಿವಾಹಿನಿಗಳು ಸಂವಾದ, ಚರ್ಚೆ, ಒಮ್ಮತದ ಪ್ರಕ್ರಿಯೆಗೆ ಆಕ್ಷೇಪಗಳನ್ನು ವ್ಯಕ್ತಪಡಿಸಿದವು ಎಂದು ಗರಂ ಆದರು.

ಇದನ್ನೂ ಓದಿ: ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರ ಎಂದ ಛಲವಾದಿ ನಾರಾಯಣಸ್ವಾಮಿ ಆರೋಪ.

5 ಕಾಂಗ್ರೆಸ್ ಗ್ಯಾರೆಂಟಿಗಳನ್ನು ಜಾರಿಗೊಳಿಸಲಿದೆ - ಸುರ್ಜೆವಾಲಾ: ''ಖರ್ಗೆ ಅವರು ನಿಜವಾದ ಪ್ರಜಾಪ್ರಭುತ್ವವಾದಿಯಾಗಿದ್ದು, ಸಂಪ್ರದಾಯಬದ್ಧವಾಗಿ ವ್ಯವಹರಿಸುತ್ತಿದ್ದಾರೆ. ಹೀಗಾಗಿ ಯಾರೂ ನಾಯಕತ್ವದ ವಿಚಾರದಲ್ಲಿ ಹೇಳಿಕೆ ನೀಡದಂತೆ ಎಲ್ಲ ಕಾಂಗ್ರೆಸ್ ನಾಯಕರಿಗೂ ಸೂಚಿಸಿದ್ದಾರೆ. ಇಲ್ಲಿಂದ ಮುಂದಕ್ಕೆ ಹೋಗಿ ಮಾಡುವಂತಹ ಔಟ್ ಟರ್ನ್ ಟೀಕೆಗಳನ್ನು ಅಶಿಸ್ತು ಎಂದು ಪರಿಗಣಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷವು ಪ್ರತಿಯೊಬ್ಬ ಕನ್ನಡಿಗನ ಕಲ್ಯಾಣಕ್ಕೆ ಬದ್ಧವಾಗಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ 5 ಕಾಂಗ್ರೆಸ್ ಗ್ಯಾರೆಂಟಿಗಳನ್ನು ಜಾರಿಗೊಳಿಸಲಿದೆ'' ಎಂದು ಅವರು ಇದೇ ವೇಳೆ ಭರವಸೆ ನೀಡಿದರು.

ಇದನ್ನೂ ಓದಿ: ಹೈಕಮಾಂಡ್ ಮೂರನೇ ಆಯ್ಕೆ ಬಯಸಿದರೆ ಸಿಎಂ ಆಗಲು ನಾನು ಸಿದ್ಧ: ಪರಮೇಶ್ವರ್

48ರಿಂದ 72 ಗಂಟೆಗಳಲ್ಲಿ ರಾಜ್ಯಕ್ಕೆ ಹೊಸ ಸರ್ಕಾರ ನೀಡುತ್ತೇವೆ: ''ಕರ್ನಾಟಕಕ್ಕೆ ಸ್ವಚ್ಛ, ಪ್ರಾಮಾಣಿಕ ಮತ್ತು ಪಾರದರ್ಶಕ ಸರ್ಕಾರ ನೀಡುವುದು ನಮ್ಮ ಕರ್ತವ್ಯವಾಗಿದ್ದು, 48ರಿಂದ 72 ಗಂಟೆಗಳಲ್ಲಿ ರಾಜ್ಯಕ್ಕೆ ಹೊಸ ಸರ್ಕಾರ ನೀಡುತ್ತೇವೆ. ನಾವು ಬ್ರಾಂಡ್ ಕರ್ನಾಟಕವನ್ನು ಮರುನಿರ್ಮಾಣ ಮಾಡುತ್ತೇವೆ. 6.5 ಕೋಟಿ ಕನ್ನಡಿಗರ ಕನಸು ನನಸಾಗಿಸುತ್ತೇವೆ. ಪ್ರಜಾಪ್ರಭುತ್ವವನ್ನು ಉಳಿಸಲು ಹಾಗೂ ಬಲಪಡಿಸಲು ಮತ್ತು ಸಾಂವಿಧಾನಿಕ ತತ್ವಗಳನ್ನು ಪುನರುಚ್ಚರಿಸಲು ಹೊಸ ಮಾರ್ಗವನ್ನು ತೋರಿಸಿದ್ದಕ್ಕಾಗಿ ನಾವು ಮತ್ತೊಮ್ಮೆ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ'' ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್​ ಮಾಡಿದರು.

ಸಿಎಂ ವಿಚಾರವಾಗಿ ಯಾರೇ ಹೇಳಿಕೆ ನೀಡಿದರು ಶಿಸ್ತು ಕ್ರಮ: ಈ ಸಂದರ್ಭದಲ್ಲಿ ನಾಯಕತ್ವ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಹೇಳಿಕೆ ನೀಡಬಾರದು ಎಂದು ಸಲಹೆ ನೀಡುತ್ತೇನೆ. ಇನ್ನುಮುಂದೆ ಈ ವಿಚಾರವಾಗಿ ಹೇಳಿಕೆ ನೀಡಿದ್ದಲ್ಲಿ, ಅದನ್ನು ಅಶಿಸ್ತಿನ ವರ್ತನೆ ಎಂದು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸುರ್ಜೆವಾಲಾ ಹೇಳಿದರು.

ಒಟ್ಟರೆ ಇಂದು ಒಂದು ಹಂತದಲ್ಲಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಿ ಹೋದರು ಎಂಬ ಅರ್ಥದಲ್ಲಿ ಸುದ್ದಿ ಹಬ್ಬಿತು. ಆದರೆ ಕೆಲ ಸಮಯದಲ್ಲಿಯೇ ಇದು ಸುಳ್ಳು ವದಂತಿ ಎಂಬುದನ್ನು ಸುರ್ಜೇವಾಲ ವಿವರಿಸಿದರು. ಅಲ್ಲಿಗೆ ಮುಂದಿನ 48 ರಿಂದ 72 ಗಂಟೆಯ ಒಳಗೆ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾತನ್ನು ಆಡುವ ಮೂಲಕ ಸಿಎಂ ಆಯ್ಕೆ ಅಂತಿಮವಾಗಿಲ್ಲ ಎಂಬ ಮಾಹಿತಿ ನೀಡಿದ್ದಾರೆ. ಸಿಎಂ ಆಯ್ಕೆ 5ನೇ ದಿನವೂ ಯಾವುದೇ ರೀತಿಯ ಫಲ ಕಂಡಿಲ್ಲ. ಇನ್ನೂ ಒಂದೆರಡು ದಿನ ಇದು ಮುಂದೆ ಹೋಗಬಹುದು ಎಂಬ ಮಾತು ಕೇಳಿ ಬರುತ್ತದೆ.

ಇದನ್ನೂ ಓದಿ: ಇನ್ನೂ ಬಿಚ್ಚಿಕೊಳ್ಳದ ಕಾಂಗ್ರೆಸ್ ಸಿಎಂ ಆಯ್ಕೆ ಕಗ್ಗಂಟು: ದೆಹಲಿಯಲ್ಲಿ ಮುಂದುವರಿದ ಕಸರತ್ತು

ಇದನ್ನೂ ಓದಿ:ಇನ್ನೂ ಬಿಚ್ಚಿಕೊಳ್ಳದ ಕಾಂಗ್ರೆಸ್ ಸಿಎಂ ಆಯ್ಕೆ ಕಗ್ಗಂಟು: ದೆಹಲಿಯಲ್ಲಿ ಮುಂದುವರಿದ ಕಸರತ್ತು

Last Updated : May 17, 2023, 9:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.