ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿತಿ ಪರಿಶೀಲಿಸಲು ಭಾರತದ ಪ್ರಸಿದ್ಧ ಹೃದ್ರೋಗ ತಜ್ಞ ದೇವಿ ಶೆಟ್ಟಿ ನಾಳೆ ಕೋಲ್ಕತ್ತಾಗೆ ತೆರಳಲಿದ್ದು, ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ಧರಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಸೌರವ್ ಗಂಗೂಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಮಾತನಾಡಿದ್ದೇನೆ. ಮಾಧ್ಯಮಗಳಲ್ಲಿ ಈ ಕುರಿತು ವರದಿಯನ್ನೂ ಗಮನಿಸಿದ್ದೇನೆ. ವೈದ್ಯರು ಸರಿಯಾದ ಚಿಕಿತ್ಸೆ ನೀಡುತ್ತಿದ್ದಾರೆ. ಮುಂದಿನ ಚಿಕಿತ್ಸೆಯ ಬಗ್ಗೆ ಅಲ್ಲಿಗೆ ತೆರಳಿ ತೀರ್ಮಾನಿಸುತ್ತೇನೆ ಎಂದು ಹೇಳಿದ್ದಾರೆ.
ಓದಿ: ಗಂಗೂಲಿ ಮುಂದಿನ ಚಿಕಿತ್ಸಾ ಯೋಜನೆಯ ಬಗ್ಗೆ ಸೋಮವಾರ ಚರ್ಚೆ: ಆಸ್ಪತ್ರೆ ಹೇಳಿಕೆ
ಲಘು ಹೃದಯಾಘಾತದ ಕಾರಣ ಕಳೆದ ಎರಡು ದಿನಗಳಿಂದ ಗಂಗೂಲಿ ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.