ETV Bharat / bharat

3 ಕೃಷಿ ಕಾನೂನುಗಳ ರದ್ದು: ಟೀಕೆಗೆ ಗುರಿಯಾದ 'ಉದ್ದೇಶ ಮತ್ತು ಕಾರಣಗಳ ಹೇಳಿಕೆ' - ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸರ್ಕಾರ ಪಟ್ಟಿ ಮಾಡಿದೆ. ಸೋಮವಾರದ ಕಲಾಪಕ್ಕೆ ಹಾಜರಾಗುವಂತೆ ಪಕ್ಷದ ಸದಸ್ಯರಿಗೆ ಸೂಚಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಪ್ ಜಾರಿಗೊಳಿಸಿವೆ.

3 ಕೃಷಿ ಕಾನೂನುಗಳ ರದ್ದು
3 ಕೃಷಿ ಕಾನೂನುಗಳ ರದ್ದು
author img

By

Published : Nov 29, 2021, 9:55 AM IST

ನವದೆಹಲಿ: ಇಂದು ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳ ರದ್ದತಿಯನ್ನು ಪ್ರಸ್ತಾಪಿಸುವ ಮಸೂದೆಯನ್ನು ಹೊರತರುವ ಮೂಲಕ ರೈತರ ಪ್ರತಿಭಟನೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 19ರಂದು ಘೋಷಿಸಿದಂತೆ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಇಂದು ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮಂಡನೆಯಾಗಲಿದೆ. ಚಳಿಗಾಲದ ಅಧಿವೇಶನಕ್ಕೂ ಮುಂಚಿತವಾಗಿ ಸಂಸತ್ತಿನ ಸದಸ್ಯರಿಗೆ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದು ಕುರಿತು 'ಉದ್ದೇಶ ಮತ್ತು ಕಾರಣಗಳ ಹೇಳಿಕೆ' ಪಟ್ಟಿ ನೀಡಲಾಗಿದೆ. ಇದು ಈಗ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ.. 3 ಕೃಷಿ ಕಾನೂನುಗಳು ವಾಪಸ್​​!

'ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ'ಯ ಅಧಿನಿಯಮ ಸಂಖ್ಯೆ 5 ಹೀಗಿದೆ:

  • ರೈತರ ಕೆಲ ಗುಂಪುಗಳು ಮಾತ್ರ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದೆಯಾದರೂ, ಸರ್ಕಾರವು ಕೃಷಿ ಕಾನೂನುಗಳ ಮಹತ್ವದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲು ಶ್ರಮಿಸುತ್ತಿದೆ. ರೈತರಿಗೆ ಲಭ್ಯವಿರುವ ಕಾರ್ಯವಿಧಾನಗಳನ್ನು ಕಸಿದುಕೊಳ್ಳದೇ, ಅವರ ಉತ್ಪನ್ನಗಳ ವ್ಯಾಪಾರಕ್ಕೆ ಹೊಸ ಮಾರ್ಗಗಳನ್ನು ಒದಗಿಸಲಾಗಿದೆ. ಇದಲ್ಲದೇ, ರೈತರು ತಮ್ಮ ಉತ್ಪನ್ನಗಳಿಗೆ ಯಾವುದೇ ಒತ್ತಾಯವಿಲ್ಲದೆ ಹೆಚ್ಚಿನ ಬೆಲೆಯನ್ನು ಪಡೆಯುವ ತಮ್ಮ ಆಯ್ಕೆಯ ಮಾರ್ಗಗಳನ್ನು ಆಯ್ಕೆ ಮಾಡಲು ಮುಕ್ತರಾಗಿದ್ದರು.
  • ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿರುವ ರೈತರ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (SKM) ಸರ್ಕಾರದ ಈ ಧ್ವನಿಯನ್ನು ತೀವ್ರವಾಗಿ ಖಂಡಿಸಿದೆ.
  • 2021 ರ ಈ ಮಸೂದೆ ಸಂಖ್ಯೆ 143, ಬೃಹತ್ ಐತಿಹಾಸಿಕ ಪ್ರತಿಭಟನೆಗಳಿಗೆ ಕಾರಣವಾದ ಹಾಗೂ 2020 ರಲ್ಲಿ ಮಾಡಿದ ಕೃಷಿ ಕಾನೂನುಗಳನ್ನು ಮರುಪಡೆಯಲು ಪ್ರಯತ್ನಿಸುತ್ತದೆ, 'ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ'ಯಲ್ಲಿ ಕೃಷಿ ಕಾನೂನುಗಳನ್ನು ಸಮರ್ಥಿಸುವುದನ್ನು ಉಲ್ಲೇಖಿಸುತ್ತದೆ. ರೈತರ ಗುಂಪು ಮಾತ್ರ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದೆ. ಈ ಕಾನೂನುಗಳ ರದ್ದತಿಯನ್ನು ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಲಿಂಕ್ ಮಾಡುತ್ತದೆ. 'ಎಲ್ಲರನ್ನೂ ಬೆಳವಣಿಗೆ ಮತ್ತು ಅಭಿವೃದ್ಧಿಯ ಪಥದಲ್ಲಿ ಒಟ್ಟಿಗೆ ಕೊಂಡೊಯ್ಯುವುದು ಅಗತ್ಯ' ಎಂದು ಎಸ್‌ಕೆಎಂ ಹೇಳಿದೆ ಎಂದು 'ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ'ಯ ಅಧಿನಿಯಮ ಸಂಖ್ಯೆ 5 ರಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ವಾರ ಪ್ರಧಾನಿ ಘೋಷಿಸಿದಂತೆ, ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸರ್ಕಾರ ಪಟ್ಟಿ ಮಾಡಿದೆ. ಸೋಮವಾರದ ಕಲಾಪಕ್ಕೆ ಹಾಜರಾಗುವಂತೆ ಪಕ್ಷದ ಸದಸ್ಯರಿಗೆ ಸೂಚಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಪ್ ಜಾರಿಗೊಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.