ETV Bharat / bharat

Bharat Bandh: ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ.. ಚಂಡೀಗಢದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ

ಮೂರು ಕೃಷಿ ಕಾಯ್ದೆಗಳ ರದ್ಧತಿಗಾಗಿ ರೈತ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ಹಿನ್ನೆಲೆ ಇಂದು ದೆಹಲಿಯ ಜಂತರ್​ ಮಂತರ್​ನಲ್ಲಿ ರೈತರು ಪ್ರತಿಭಟನಾ ರ‍್ಯಾಲಿ ನಡೆಸಲಿದ್ದಾರೆ.

ಪ್ರತಿಭಟನಾ ರ್ಯಾಲಿ
ಪ್ರತಿಭಟನಾ ರ್ಯಾಲಿ
author img

By

Published : Sep 27, 2021, 8:09 AM IST

ನವದೆಹಲಿ: ಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನೆಗೆ 500 ಕ್ಕೂ ಹೆಚ್ಚು ಸಂಘಟನೆಗಳು, 15 ಕಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ.

ಇಂದು ಬೆಳಗ್ಗೆ 11 ಗಂಟೆಗೆ ರೈತ-ಕಾರ್ಮಿಕ ಸಂಘಟನೆಗಳು ನವದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನಾ ರ‍್ಯಾಲಿ ಆಯೋಜಿಸಿವೆ.

ಇತ್ತ ಚಂಡೀಗಢದಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಸಂಪರ್ಕಿಸುವ ಹರಿಯಾನ - ಪಂಜಾಬ್ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದಿದ್ದಾರೆ. ಹೆದ್ದಾರಿಗಳಲ್ಲಿ ನೂರಾರು ರೈತರು ಜಮಾವಣೆಗೊಂಡಿದ್ದರಿಂದ ಹಲವಾರು ಗಂಟೆಗಳ ಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು. ಅಲ್ಲದೇ, ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಸ್ಥಳಗಳಲ್ಲಿ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ತುರ್ತು ವೈದ್ಯಕೀಯ ಸೇವೆಗಳಿಗೆ ಅವಕಾಶವಿದೆ.

'ಭಾರತ್ ಬಂದ್' ಹಿನ್ನೆಲೆ, ರಾಜ್ಯದಲ್ಲಿ ಸಂಚಾರ ದಟ್ಟಣೆಗಳಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.. ಹರಿಯಾಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಹಿಂಸಾಚಾರ ತಡೆಗಟ್ಟುವುದು ಮತ್ತು ಸಂಚಾರ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಕಾರ್ಯನಿರ್ವಹಣೆ ಸುಲಭಗೊಳಿಸುವುದು ಈ ವ್ಯವಸ್ಥೆಗಳ ಪ್ರಾಥಮಿಕ ಉದ್ದೇಶ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ಯಾವುವು? ಅವುಗಳ ಬಗ್ಗೆ ನಿಮಗೆಷ್ಟು ಗೊತ್ತು?

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರೈತರು ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಅವರು ಮನವಿ ಮಾಡಿದರು. ಬಂದ್ ಕರೆಯ ನೆಪದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.