ETV Bharat / bharat

ಸಾವು ನೋವಿನ ಹೊರತಾಗಿಯೂ ರೈತರು ತಮ್ಮ ನಿಲುವಿಗೆ ಅಂಟಿಕೊಂಡಿದ್ದಾರೆ: ರಾಹುಲ್ ಗಾಂಧಿ

author img

By

Published : Jun 9, 2021, 3:35 PM IST

Updated : Jun 9, 2021, 3:41 PM IST

ಹಲವಾರು ಸಾವುಗಳು ಸಂಭವಿಸಿದರೂ ರೈತರು ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಹುಲ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಪ್ರತಿಭಟನಾ ಸ್ಥಳಗಳಲ್ಲಿ 500ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ.

Rahul Gandhi
ರಾಹುಲ್ ಗಾಂಧಿ

ನವದೆಹಲಿ: ಪ್ರತಿಭಟನಾ ಸ್ಥಳದಲ್ಲಿ ಹಲವಾರು ಸಾವುಗಳು ಸಂಭವಿಸಿದರೂ ರೈತರು ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

"ತಮ್ಮ ಹೊಲಗಳನ್ನು ಮತ್ತು ದೇಶವನ್ನು ಕಾಪಾಡಲು, ರೈತರು ನಿಧಾನವಾಗಿ ಸಾಯುತ್ತಿದ್ದಾರೆ. ಆದರೆ, ಅವರು ಹೆದರುವುದಿಲ್ಲ ಮತ್ತು ಅವರು ತಮ್ಮ ನಿಲುವಿನ ಕುರಿತು ದೃಢವಾಗಿದ್ದಾರೆ" ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದು, #500DeathsAtFarmersProtest ಎಂಬ ಹ್ಯಾಶ್‌ಟ್ಯಾಗ್‌ ಹಾಕಿದ್ದಾರೆ.

Farmers are true to their stance despite several deaths: Rahul
ರಾಹುಲ್ ಗಾಂಧಿ ಟ್ವೀಟ್

ಕಳೆದ ವರ್ಷ ನವೆಂಬರ್ 26ರಿಂದ ರಾಷ್ಟ್ರ ರಾಜಧಾನಿಯ ಹಲವಾರು ಗಡಿಗಳಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಆರು ತಿಂಗಳಲ್ಲಿ ಪ್ರತಿಭಟನಾ ಸ್ಥಳಗಳಲ್ಲಿ 500ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರೈತರು ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಪಡಿಸಿಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

Last Updated : Jun 9, 2021, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.