ಕರ್ನಾಲ್(ಹರಿಯಾಣ): ಕೃಷಿ ಸಂಬಂಧಿ ಕೇಂದ್ರ ಸರ್ಕಾರದ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಕಿಸಾನ್ ಮಹಾ ಪಂಚಾಯತ್ ಮೂಲಕ ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಲ್ನಲ್ಲಿ ರೈತ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದ ವಿಚಾರದಲ್ಲಿ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಲ್ನ ಮಿನಿ ಸೆಕ್ರೆಟರಿಯೇಟ್ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಮುಂದುವರೆಸಿದ್ದು, ಸೆಕ್ರೆಟರಿಯೇಟ್ ಮುಂಭಾಗದಲ್ಲೇ ರೈತರು ಬಿಡಾರವನ್ನು ಹೂಡಿದ್ದು, ಸರ್ಕಾರ ಭರವಸೆ ನೀಡುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.
ಸದ್ಯಕ್ಕೆ ಹರಿಯಾಣ ಸರ್ಕಾರ ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಮೆಸೇಜಿಂಗ್ ಸರ್ವೀಸ್ ಅನ್ನು ಸ್ಥಗಿತಗೊಳಿಸಿದೆ. ಇಂದು ರಾತ್ರಿ 11.59ರವರೆಗೆ ಸುಳ್ಳು ಮಾಹಿತಿ ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: 8 ವರ್ಷದ ಪ್ರೇಮ.. ಮೂರು ಬಾರಿ ಅಬಾರ್ಷನ್, ಹಲ್ಲೆ.. ಪೊಲೀಸ್ ಮೊರೆ ಹೋದ ಯುವತಿ