ಹಿಸಾರ್ (ಹರಿಯಾಣ): ಕೋವಿಡ್ ಆಸ್ಪತ್ರೆ ಉದ್ಘಾಟಿಸಲು ಆಗಮಿಸಿದ್ದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಅಲ್ಲಿ ನೆರೆದಿದ್ದ ರೈತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ರೈತರ ಪ್ರತಿಭಟನೆ ತೀವ್ರವಾದ ಪರಿಣಾಮ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಕೇಂದ್ರವು ಅಂಗೀಕರಿಸಿದ ಕೃಷಿ ಕಾನೂನುಗಳ ತಿದ್ದುಪಡಿ ವಿರುದ್ಧ ರೈತರು ಕಳೆದ ವರ್ಷ ನವೆಂಬರ್ 26 ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋವಿಡ್ ಮಧ್ಯೆ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ ಕೈಬಿಡುವಂತೆ ಈ ಹಿಂದೆ ಹರಿಯಾಣ ಸಿಎಂ ರೈತರನ್ನು ಒತ್ತಾಯಿಸಿದ್ದರು, ಅಲ್ಲದೆ ಪ್ರತಿಭಟನಾ ಸ್ಥಳದಲ್ಲಿ ಭಾಗಿಯಾದ ರೈತರು ತಮ್ಮ ಊರುಗಳಿಗೆ ತೆರಳಿ ಸೋಂಕು ಹರಡಲು ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದೀಗ ಮುಖ್ಯಮಂತ್ರಿ ವಿರುದ್ಧ ರೈತರು ಆಕ್ರೋಶ ಹೊರಹಾಕಿ ಪ್ರತಿಭಟನೆಗೆ ಇಳಿದಿದ್ದರು.
ಇತ್ತ ಹರಿಯಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿ ಲಾಕ್ಡೌನ್ ಅನ್ನು ಮೇ 24ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಶಾಕಿಂಗ್ ವಿಡಿಯೋ : ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹ ತಿಂದ ಶ್ವಾನಗಳು